ಮನೆ ರಾಜ್ಯ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹುಟ್ಟುಹಬ್ಬ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯಗಳ ಮಹಾಪೂರ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹುಟ್ಟುಹಬ್ಬ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯಗಳ ಮಹಾಪೂರ

0

ಬೆಂಗಳೂರು (Bengaluru)- ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಅವರು ಇಂದು 90ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌, ಲೋಕಸಭಾ ಸಭಾಪತಿ ಓಂ ಬಿರ್ಲಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಅನೇಕರು ಶುಭ ಹಾರೈಸಿದ್ದಾರೆ.

‘ನಮ್ಮ ಮಾಜಿ ಪ್ರಧಾನಿ ಮತ್ತು ಗೌರವಾನ್ವಿತ ರಾಜಕಾರಣಿ ಎಚ್‌.ಡಿ.ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ದೀರ್ಘ ಆಯುಷ್ಯ, ಆರೋಗ್ಯಕರ ಜೀವನವನ್ನು ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

‘ಸದಾ ನನ್ನ ಕೈಹಿಡಿದು ಮುನ್ನಡೆಸಿದ ಅವರು ನನ್ನ ಪಾಲಿಗೆ ತಂದೆಯಷ್ಟೇ ಅಲ್ಲ; ಗುರು, ದೈವ, ಶಕ್ತಿಯೂ ಹೌದು. ನನಗಷ್ಟೇ ಅಲ್ಲ, ಈ ನಾಡಿಗೆ, ದೇಶಕ್ಕೆ ಇನ್ನಷ್ಟು ದೀರ್ಘಕಾಲ ಅವರ ಸೇವೆ-ಮಾರ್ಗದರ್ಶನ ಅಗತ್ಯವಿದೆ. ಆ ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಅಲ್ಪಕಾಲವಷ್ಟೇ ಅಧಿಕಾರದಲ್ಲಿದ್ದರೂ ಕರ್ನಾಟಕ ಮತ್ತು ಭಾರತಕ್ಕೆ ಆವಿಸ್ಮರಣೀಯ ಕೊಡುಗೆ ನೀಡಿದವರು ಇವರು. ಕಾಯಾ ವಾಚಾ, ಮನಸಾ ಜನರ ಉದ್ಧಾರಕ್ಕಾಗಿ ಶ್ರಮಿಸಿದ ಅವರು ಭಾರತದ ರಾಜಕೀಯ ಕರ್ಮಯೋಗಿ. ತೊಂಬತ್ತರ ಹರೆಯದಲ್ಲೂ ಜನರಪರ ಹೋರಾಟ ನಡೆಸುತ್ತಿರುವ ಧಣಿವರಿಯದ ಕಾಯಕಯೋಗಿ.

ಭಾರತದ ಮಾಜಿ ಪ್ರಧಾನಮಂತ್ರಿಗಳು, ಮಣ್ಣಿನಮಗ, ನನ್ನ ಪೂಜ್ಯ ತಂದೆಯವರಾದ ಎಚ್.ಡಿ.ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು ಹಾಗೂ ನನ್ನ ಗೌರವಪೂರ್ವಕ ಪ್ರಣಾಮಗಳು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಹಿರಿಯರು, ಮಾಜಿ ಪ್ರಧಾನಮಂತ್ರಿಗಳು, ಆತ್ಮೀಯರಾದ ಎಚ್.ಡಿ.ದೇವೇಗೌಡರಿಗೆ ಜನ್ಮದಿನದ ಹೃತ್ಪೂರ್ವಕ ಶುಭಕಾಮನೆಗಳು. ಭಗವಂತನ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಹಿಂದಿನ ಲೇಖನಥಾಮಸ್ ಕಪ್‌ ವಿಜೇತ ಲಕ್ಷ್ಯಸೇನ್‌ ಗೆ ಸರ್ಕಾರದಿಂದ 5 ಲಕ್ಷ ರೂ. ಬಹುಮಾನ
ಮುಂದಿನ ಲೇಖನಅಕ್ರಮ ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್‌ ಅಳವಡಿಸಲು ಸರ್ಕಾರದಿಂದ ಚಿಂತನೆ