ಮನೆ ಕಾನೂನು 60,000 ರೂ.ಗೆ ನವಜಾತ ಶಿಶು ಮಾರಾಟಕ್ಕೆ ಯತ್ನ: ನಾಲ್ವರ ಬಂಧನ

60,000 ರೂ.ಗೆ ನವಜಾತ ಶಿಶು ಮಾರಾಟಕ್ಕೆ ಯತ್ನ: ನಾಲ್ವರ ಬಂಧನ

0

ತುಮಕೂರು: ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

Join Our Whatsapp Group

ಕುಣಿಗಲ್‌ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಮೇಲ್ವಿಚಾರಕಿ ಹುಚ್ಚ ರಂಗಮ್ಮ ಅವರ ದೂರಿನ ಆಧಾರದ ಮೇಲೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫೆಬ್ರವರಿ 20 ರಂದು ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅವಿವಾಹಿತ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಮಗುವನ್ನು ಯುವತಿಯ ಪ್ರಿಯಕರ ಶ್ರೀನಂದ ಮತ್ತು ಅಂಗನವಾಡಿ ಕಾರ್ಯಕರ್ತೆ ಜ್ಯೋತಿ ಮಾಗಡಿ ತಾಲೂಕಿಗೆ ಕರೆ ತಂದು ಮುಬಾರಕ್ ಪಾಷಾ ಎಂಬುವವರಿಗೆ 60,000 ರೂ.ಗೆ ಮಾರಾಟ ಮಾಡಲು ಯತ್ನಿಸಿದ್ದರು ಎಂದು ರಂಗಮ್ಮ ಅವರು ದೂರಿನಲ್ಲಿ ತಿಳಿಸಿದ್ದಾರೆ.