ಬೆಂಗಳೂರು (Bengaluru): ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ತೀವ್ರವಾಗಿದ್ದು, ಉತ್ತರ ಒಳನಾಡಿನಲ್ಲಿ ಚುರುಕುಗೊಂಡಿದೆ. ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ಬುಧವಾರ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಗೆ ‘ಆರೆಂಜ್ ಅಲರ್ಟ್’, ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಹಾಸನ ಹಾಗೂ ಮೈಸೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. 24 ಗಂಟೆಗಳ ಅವಧಿಯಲ್ಲಿ ಕರಾವಳಿಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.