ಮನೆ ರಾಜ್ಯ ಕರಾವಳಿ, ಮಲೆನಾಡಿನಲ್ಲಿ ನಾಲ್ಕು ದಿನ ಭಾರಿ ಮಳೆ

ಕರಾವಳಿ, ಮಲೆನಾಡಿನಲ್ಲಿ ನಾಲ್ಕು ದಿನ ಭಾರಿ ಮಳೆ

0

ಬೆಂಗಳೂರು (Bengaluru): ಕರಾವಳಿ, ಮಲೆನಾಡಿನ ಕೆಲವೆಡೆ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದಿನ 48 ಗಂಟೆಗಳು ಮುಂದುವರೆಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ತೀರದಲ್ಲಿ ಬಿರುಗಾಳಿಯು ಪ್ರತಿ ಗಂಟೆಗೆ 45 ಕಿ.ಮೀ. ನಿಂದ 55 ಕಿ.ಮೀ. ವೇಗದಲ್ಲಿ ಬೀಸುತ್ತಿದೆ. ಈ ವೇಗವು ಮುಂದಿನ 48 ಗಂಟೆಗಳ ಅವಧಿಯಲ್ಲಿ 65 ಕಿ.ಮೀ. ತಲುಪುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಇಲಾಖೆ ಸೂಚಿಸಿದೆ.

ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗೆ ಗುರುವಾರ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕಲಬುರ್ಗಿ, ವಿಜಯಪುರ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಹಾಗೂ ಹಾಸನ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಮುಂದಿನ 48 ಗಂಟೆಗಳು ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಹಿಂದಿನ ಲೇಖನಸಿದ್ದರಾಮಯ್ಯರಂಥವರು ಇರುವುದೇ ದುರಂತ: ಸಚಿವ ಅಶ್ವತ್ಥ ನಾರಾಯಣ
ಮುಂದಿನ ಲೇಖನನೈರ್ಮಲ್ಯ ಕಾಪಾಡಿಕೊಳ್ಳುವುದಕ್ಕೆ ಮಾಹಿತಿ ಶಿಕ್ಷಣ ಸಂವಹನದ ಜಾಗೃತಿ ಮೂಡಿಸಿ: ಡಾ.ಬಗಾದಿ ಗೌತಮ್