ಬೆಳಗಾವಿ: ಹೊಲಕ್ಕೆ ಹೊರಟಿದ್ದ ನಾಲ್ವರು ರೈತರಿಗೆ ಮೇಲೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಗೋಧೋಳಿ ಗ್ರಾಮದ ಬಳಿಯ ಧಾರವಾಡ ರಾಮನಗರ ರಾಜ್ಯ ಹೆದ್ದಾರಿಯಲ್ಲಿ ತಡರಾತ್ರಿ ನಡೆದಿದೆ.
ಜಿಲ್ಲೆಯ ಖಾನಾಪುರ ತಾಲೂಕಿನ ಗೋಧೋಳಿ ಗ್ರಾಮದಲ್ಲಿ ತಮ್ಮ ಹೊಲದಲ್ಲಿ ಬೆಳೆದಿದ್ದ ಕಬ್ಬಿಗೆ ನೀರು ಹಾಯಿಸಲು ಹೊರಟಿದ್ದ ನಾಲ್ವರು ರೈತರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗೊಧೋಳಿ ಗ್ರಾಮದ ಮಹಾಬಲೇಶ್ವರ ಶಿಂಧೆ (65), ಪುಂಡಲೀಕ ರೇಡೇಕರ(75) ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡ ಕೃಷ್ಣ ರೇಡೇಕರ(74) ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮತ್ತೋರ್ವ ರೈತ ಮಂಜುನಾಥ ಕಾಗಿನಕರ (47)ಗೆ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನ ತಿಳಿದ ಶಾಸಕಿ ಅಂಜಲಿ ನಿಂಬಾಳ್ಕರ್ ಖಾನಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.














