ಮನೆ ರಾಜ್ಯ ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ

ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ

0

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ಕೋಲಾರದಿಂದ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, ಒಬ್ಬ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದಿವರಿದಿದೆ.

Join Our Whatsapp Group

ಮೃತ ವಿದ್ಯಾರ್ಥಿನಿಯ ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಜಿಲ್ಲಾಡಳಿತದ ನೆರವಿನಿಂದ ಉಳಿದ ಮೂರು ಜನ ವಿದ್ಯಾರ್ಥಿನಿಯರ ಶವಕ್ಕಾಗಿ ಹುಡುಕಾಟ ಸಾಗಿದೆ. ಪ್ರವಾಸಕ್ಕೆ ಹೋಗಿದ್ದ ಇತರ ಮಕ್ಕಳನ್ನು ಮರಳಿ ಊರಿಗೆ ಕಳಿಸಲು ಜಿಲ್ಲಾಡಳಿತ ಹಾಗೂ ಶಾಸಕ ಸಮೃದ್ದಿ ಮಂಜುನಾಥ್ ಸಿದ್ಧತೆ ಮಾಡುತ್ತಿದ್ದಾರೆ.

ಪ್ರಾಂಶುಪಾಲೆ ಅಮಾನತು, ಸಿಬ್ಬಂದಿ ವಜಾ

ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರು ನೀರುಪಾಲು ಪ್ರಕರಣ ಸಂಬಂಧ ಶಾಲಾ ಪ್ರಾಂಶುಪಾಲೆ ಶಶಿಕಲಾರನ್ನು ಅಮಾನತುಗೊಳಿಸಲಾಗಿದೆ. ಅಥಿತಿ ಉಪನ್ಯಾಕರು ಮತ್ತು ಡಿ ಗ್ರೂಪ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಆರೋಪ ಹಿನ್ನೆಲೆ ಪ್ರಾಂಶುಪಾಲೆಯನ್ನು ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅದೇಶ ಹೊರಡಿಸಿದ್ದಾರೆ.

 ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿಯರು ಸಮುದ್ರಪಾಲಾದ ಬೆನ್ನಲ್ಲೇ ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಕಡಲ ತೀರಕ್ಕೆ ತೆರಳದಂತೆ ಪ್ರವಾಸಿಗರಿಗೆ ಪೊಲೀಸರ ಸೂಚನೆ ನೀಡಿದ್ದಾರೆ.

ಮುಳಬಾಗಿಲಿನ ಕೊತ್ತೂರು ಮುರಾರ್ಜಿ ದೇಸಾಯಿ ವಸತಿ ಶಾಲೆಯ 9 ನೇ ತರಗತಿಯ ಶಾವಂತಿ (15) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು, ಮುಳಬಾಗಿಲಿನ ಯಶೋಧಾ, ವೀಕ್ಷಣಾ, ಲಿಪಿಕಾರನ್ನು ರಕ್ಷಿಸಲಾಗಿದೆ. ಇವರಲ್ಲಿ ಓರ್ವಳ ಸ್ಥಿತಿ ಗಂಭೀರವಾಗಿದ್ದು ಮೂವರಿಗೂ ಮುರುಡೇಶ್ವರದ ಆರ್​​ಎನ್​ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ದೀಕ್ಷಾ, ಲಾವಣ್ಯ, ವಂದನ ಸಮುದ್ರಪಾಲಾಗಿದ್ದು ಕಣ್ಮರೆಯಾಗಿದ್ದಾರೆ. ಇವರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.