ಮನೆ ರಾಷ್ಟ್ರೀಯ ಜೈಪುರದ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ

ಜೈಪುರದ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ

0
ಸಾಂದರ್ಭಿಕ ಚಿತ್ರ

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆಯ ಇ-ಮೇಲ್ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Join Our Whatsapp Group

ಎರಡು ಆಸ್ಪತ್ರೆಗಳು ಮತ್ತು ದೆಹಲಿ ಐಜಿಐ ವಿಮಾನ ನಿಲ್ದಾಣಕ್ಕೆ ಭಾನುವಾರ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ, ಜೈಪುರದ ನಾಲ್ಕು ಶಾಲೆಗಳಿಗೆ ಸೋಮವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.

ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ ಮತ್ತು ಬಾಂಬ್ ಮತ್ತು ಶ್ವಾನ ದಳದೊಂದಿಗೆ ಪೊಲೀಸ್ ತಂಡಗಳು ಶಾಲೆಗಳನ್ನು ತಲುಪಿವೆ. ಕಳೆದ ವಾರ ದೆಹಲಿ ಮತ್ತು ಅಹಮದಾಬಾದ್‌ ನಲ್ಲಿ ಇದೇ ರೀತಿಯ ಘಟನೆ ನಡೆದಿದೆ.

ನಾಲ್ಕು-ಐದು ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ, ಪೊಲೀಸರು ಶಾಲೆಗಳನ್ನು ತಲುಪಿದ್ದಾರೆ. ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದವರನ್ನು ಗುರುತಿಸಲು ಪೊಲೀಸರು ಈಗ ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ಬಿಜು ಜಾರ್ಜ್​ ಹೇಳಿದ್ದಾರೆ.

ಭಾನುವಾರ ದೆಹಲಿಯ ಬುರಾರಿ ಆಸ್ಪತ್ರೆ ಹಾಗೂ ಮಂಗೋಲ್​ಪುರಿಯಲ್ಲಿರುವ ಸಂಜಯ್ ಗಾಂಧಿ ಆಸ್ಪತ್ರೆಗೆ ಬಾಂಬ್​ ಬೆದರಿಕೆ ಕರೆಗಳು ಬಂದಿವೆ.

ಶಾಲಾ ಕಟ್ಟಡದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬರು ಪ್ರಾಂಶುಪಾಲರಿಗೆ ಇ-ಮೇಲ್ ಕಳುಹಿಸಿದ್ದಾರೆ.

ಈ ಮಾಹಿತಿ ಬಂದ ತಕ್ಷಣ ಶಾಲೆಗಳಲ್ಲಿ ಆತಂಕ ಮನೆ ಮಾಡಿತ್ತು ತಕ್ಷಣವೇ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಶಾಲೆಗಳಿಂದ ಸ್ಥಳಾಂತರಿಸಲಾಯಿತು.