ಮನೆ ಅಪರಾಧ ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರ ಬಂಧನ

ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರ ಬಂಧನ

0

ಇಂಫಾಲ: ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

Join Our Whatsapp Group

ಕಂಗ್ಲೇಪಕ್ ಕಮ್ಯುನಿಸ್ಟ್ ಪಾರ್ಟಿ (ಪೀಪಲ್ಸ್ ವಾರ್ ಗ್ರೂಪ್) ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಬಂಧಿಸಲಾಗಿದೆ.  ಇಂಫಾಲ್ ಪಶ್ಚಿಮ ಜಿಲ್ಲೆಯ ಚೋಂಗ್ಥಮ್‌ ಶ್ಯಾಮಚಂದ್ರ ಸಿಂಗ್ (23), ಇಂಫಾಲ್ ಪೂರ್ವ ಜಿಲ್ಲೆಯ ಮೈಬಮ್‌ ಸೂರಜ್ ಖಾನ್ (32) ಹಾಗೂ ಬೋಗಿಮಯುಂ ಸಾಹಿದ್ ಖಾನ್ (30) ಬಂಧಿತರು.

ಇವರು ಅಕ್ರಮ ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದು, ಜನರನ್ನು ಸುಲಿಗೆ ಮಾಡುತ್ತಿದ್ದರು. ಬಂಧಿತರಿಂದ ಶಸ್ತ್ರಾಸ್ತ್ರ ಹಾಗೂ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತೊಂದು ಘಟನೆಯಲ್ಲಿ, ನಿಷೇಧಿತ ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್‌ಗೆ ಸೇರಿದ ಉಗ್ರನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ಉಗ್ರನನ್ನು ಸಂಗೊಂಶುಂಫಮ್ ವಾರಿಶ್ (25) ಎಂದು ಗುರುತಿಸಲಾಗಿದೆ. ಆತನ ಬಳಿಯಿದ್ದ 32 ಪಿಸ್ತೂಲ್ ಹಾಗೂ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.