ಮನೆ ಅಪರಾಧ ಬ್ಯಾಂಕ್ ಸಿಬ್ಬಂದಿಗಳಿಂದಲೇ ಗ್ರಾಹಕರಿಗೆ ವಂಚನೆ: ದೂರು ದಾಖಲು

ಬ್ಯಾಂಕ್ ಸಿಬ್ಬಂದಿಗಳಿಂದಲೇ ಗ್ರಾಹಕರಿಗೆ ವಂಚನೆ: ದೂರು ದಾಖಲು

0

ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿಗಳೇ ಗ್ರಾಹಕರಿಗೆ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಬೋಳರಾಮೇಶ್ವರ ದೇಗುಲ ಬಳಿ ಇರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ.

ಬ್ಯಾಂಕ್​ ಮ್ಯಾನೇಜರ್ ಸಂದೀಪ್ ಕೊಲ್ಲೂರಿ, ಪ್ರಶಾಂತ್, ನಾರಾಯಣಸ್ವಾಮಿ, ಲಾವಣ್ಯ, ಶ್ವೇತಾ ವಂಚನೆ ಎಸಗಿದ ಆರೋಪಿಗಳು.

ಗ್ರಾಹಕರು ಬ್ಯಾಂಕ್ ​​ನಲ್ಲಿಟ್ಟದ ಚಿನ್ನ, ಎಫ್ ​ಡಿ ಹಣವನ್ನು ಬ್ಯಾಂಕ್ ಸಿಬ್ಬಂದಿ ದುರುಪಯೋಗಪಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ.

ಆರೋಪಿಗಳು ಗ್ರಾಹಕರ ಚಿನ್ನವನ್ನು ಮಾರಾಟ ಮಾಡಿ ನಕಲಿ‌ ಚಿನ್ನವನ್ನು ಬ್ಯಾಂಕ್​ ಲಾಕರ್​​ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. 141 ಚಿನ್ನದ ಪ್ಯಾಕೆಟ್ ​ಗಳ ಪೈಕಿ 140 ಪ್ಯಾಕೆಟ್​​ ಗಳಲ್ಲಿ ನಕಲಿ ಚಿನ್ನ ಪತ್ತೆಯಾಗಿವೆ. ಬ್ಯಾಂಕ್ ಆಡಿಟ್ ​ನಲ್ಲಿ ಕೋಟ್ಯಾಂತರ ರೂ. ವಂಚನೆ ಮಾಡಿರುವುದು ಬಹಿರಂಗಗೊಂಡಿದೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬೆಂಗಳೂರು ಮ್ಯಾನೇಜರ್​ ಆರೋಪಿಗಳ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಿಂದಿನ ಲೇಖನಅಮೆರಿಕದ ಮಾಜಿ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ನಿಧನ
ಮುಂದಿನ ಲೇಖನಮೊಬೈಲ್ ಬಳಸುವ ವಿಚಾರಕ್ಕೆ ಗಲಾಟೆ: ತಂದೆಯಿಂದಲೇ ಮಗನ ಕೊಲೆ