ಮನೆ ರಾಜ್ಯ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್: ಸಿಎಂ ಘೋಷಣೆ

ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್: ಸಿಎಂ ಘೋಷಣೆ

0

ಬೆಂಗಳೂರು: ಸಂಘಟಿತ ವಲಯದಲ್ಲಿ ದುಡಿಯುವ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು. ಇದರಿಂದ 30 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದ್ದು, ಇದಕ್ಕಾಗಿ ₹1,000 ಕೋಟಿ ಒದಗಿಸಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು, ಮಹಿಳೆಯರಿಗೆ ಕೆಲವೊಂದು ಯೋಜನೆಗಳನ್ನು ನೀಡಿದ್ದಾರೆ. ಅವುಗಳಲ್ಲಿ ಪ್ರಮುಖವಾದವು ಇಲ್ಲಿವೆ.

* ಶ್ರಮ ಶಕ್ತಿ ಎಂಬ ಹೊಸ ಯೋಜನೆ ಜಾರಿಗೆ ತಂದು ಭೂರಹಿತ ಮಹಿಳಾ ಕಾರ್ಮಿಕರಿಗೆ ತಿಂಗಳಿಗೆ ₹ 500 ಸಹಾಯಧನ ನೀಡಲಾಗುವುದು.

* ಶಾಲಾ–ಕಾಲೇಜುಗಳ ವಿದ್ಯಾರ್ಥಿನಿಯರಿಗೆ ‘ವಿದ್ಯಾವಾಹಿನಿ’ ಯೋಜನೆ ಅಡಿಯಲ್ಲಿ ₹ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್‌ ಪಾಸ್‌ ಸೌಲಭ್ಯ ನೀಡಲಾಗುತ್ತದೆ. ಇದು 8 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ.

* ಸ್ವಸಹಾಯ ಗುಂಪುಗಳಿಗೆ ಪ್ರಮಾಣಿತ ಉತ್ಪನ್ನಗಳನ್ನು ತಯಾರಿಸಲು ನೆರವಾಗುವ ಸ್ತ್ರೀ ಸಾಮರ್ಥ್ಯ ಯೋಜನೆಯಡಿ 50 ಸಾವಿರ ಸ್ವ ಸಹಾಯ ಗುಂಪುಗಳಿಗೆ ತಲಾ ₹1 ಲಕ್ಷದಂತೆ ₹500 ಕೋಟಿ ಸಮುದಾಯ ಬಂಡವಾಳ ನಿಧಿ ನೀಡಲು ನಿರ್ಧರಿಸಲಾಗಿದೆ.

* ವಿವಿಧ ಸ್ವಯಂ ಉದ್ಯೋಗ ಯೋಜನೆಗಳಡಿ 7,239 ಸ್ವಸಹಾಯ ಸಂಘಗಳಿಗೆ ₹100 ಸಮುದಾಯ ಬಂಡವಾಳ ನಿಧಿ ಹಾಗೂ 5.68 ಲಕ್ಷ ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಸಂಪರ್ಕದಡಿ ₹11,391 ಕೋಟಿ ಸಾಲ ಒದಗಿಸಲು ನಿರ್ಧಾರ.

* ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಯಲು ಆರೋಗ್ಯ ಪುಷ್ಟಿ ಯೋಜನೆಯಡಿ ಅರ್ಹ ವಿವಾಹಿತ ಮಹಿಳೆಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ಮತ್ತು Prophylactic IFA ಮಾತ್ರೆಗಳನ್ನು ವಿತರಿಸಲು ಕ್ರಮ.

* ಆ್ಯಸಿಡ್ ದಾಳಿ ಮಹಿಳಾ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಮತ್ತು ಸ್ವಯಂ ಉದ್ಯೋಗಕ್ಕಾಗಿ ಮಹಿಳಾ ಅಭಿವೃದ್ಧಿ ನಿಗಮದಿಂದ ಬಡ್ಡಿ ರಹಿತ ಸಾಲ ನೀಡಲಾಗುವುದು.