ಮೈಸೂರು: ಕರ್ನಾಟಕದ ವಸ್ತುಪ್ರದರ್ಶನದ ಪ್ರಾಧಿಕಾರದ ವತಿಯಿಂದ ನವೆಂಬರ್ 14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ 14 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ವಸ್ತು ಪ್ರದರ್ಶನವನ್ನು ವೀಕ್ಷಿಸಲು ಉಚಿತ ಪ್ರವೇಶಾವಕಾಶವನ್ನು ಕಲ್ಪಿಸಿದೆ.
ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ವಸ್ತು ಪ್ರದರ್ಶನಕ್ಕೆ ಭೇಟಿ ನೀಡುವುದರ ಮೂಲಕ ಮಕ್ಕಳ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.