ಮನೆ ರಾಜಕೀಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‍ಲೈನ್ ಕೋಚಿಂಗ್

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‍ಲೈನ್ ಕೋಚಿಂಗ್

0

ಬೆಂಗಳೂರು: ‘ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ’ ಎಂಬ ಹೊಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ವೇದಿಕೆಯ ಮೂಲಕ ಉಚಿತ ಕೋಚಿಂಗ್ ಸೌಲಭ್ಯವನ್ನು ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದರು.

ರಾಜ್ಯ ಬಜೆಟ್‌ ಮಂಡಿಸುತ್ತಿರುವ ಅವರು, ಕೆಪಿಎಸ್‌ಸಿ, ಯುಪಿಎಸ್‌ಸಿ, ಎಸ್‌ಎಸ್‌ಸಿ, ಬ್ಯಾಂಕಿಂಗ್‌, ರೈಲ್ವೆ, ಸಿಡಿಎಸ್, ನೀಟ್, ಜೆಇಇ ಮುಂತಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರ್ಕಾರದ ವತಿಯಿಂದ ಆನ್‌ಲೈನ್‌ ಕೋಚಿಂಗ್‌ ನೀಡಲಾಗುವುದು ಎಂದು ತಿಳಿಸಿದರು.

ಈ ಯೋಜನೆ ಅಡಿಯಲ್ಲಿ ಕೆಪಿಎಸ್‌ಸಿ, ಯುಪಿಎಸ್‌ಸಿ, ಎಸ್‌ಎಸ್‌ಸಿ, ಬ್ಯಾಂಕಿಂಗ್‌, ರೈಲ್ವೆ, ಸಿಡಿಎಸ್, ನೀಟ್, ಜೆಇಇ ಮುಂತಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

ಇದೇ ರಾಜ್ಯದ ಪ್ರತಿ ತಾಲೂಕುಗಳಲ್ಲೂ ನೀಟ್‌ ಪರೀಕ್ಷೆಗೆ ತರಬೇತಿ ನೀಡುವುದಾಗಿ ಬೊಮ್ಮಾಯಿ ಘೋಷಿಸಿದರು.