ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಯನ್ನು ಜೂನ್ 11ರಿಂದ ಆರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು.
ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಅನ್ವಯವಾಗಲಿದೆ. ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದರು.
ಯಾವೆಲ್ಲ ಬಸ್ಗಳಲ್ಲಿ ಉಚಿತ ಪ್ರಯಾಣ?
ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ
ಎಸಿ, ನಾನ್ ಎಸಿ ಸ್ಲೀಪರ್ ಬಸ್ ಗಳಲ್ಲಿ ಉಚಿತ ಪ್ರಯಾಣವಿಲ್ಲ
ಎಸಿ ಮತ್ತು ಐಷಾರಾಮಿ ಬಸ್ ಗಳಲ್ಲಿ ಉಚಿತ ಪ್ರಯಾಣವಿಲ್ಲ
ಅಂತಾರಾಜ್ಯ ಪ್ರಯಾಣಕ್ಕಿಲ್ಲ ಉಚಿತ ಸೌಲಭ್ಯ
KSRTC ಬಸ್ಗಳಲ್ಲಿ ಶೇ 50ರಷ್ಟು ಸೀಟ್ ಪುರುಷರಿಗೆ ಮೀಸಲು
ಬಿಎಂಟಿಸಿ ಬಸ್ ಗಳಲ್ಲಿ ಯಾವುದೇ ಸೀಟ್ ಮೀಸಲು ಇರುವುದಿಲ್ಲ