ನವದೆಹಲಿ: 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.
ಇಂದು (ಗುರುವಾರ) ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ 25 ಸಾವಿರ ಜನೌಷಧಿ ಕೇಂದ್ರಗಳನ್ನು ತೆರೆಯುವ ಕಾರ್ಯವೂ ತ್ವರಿತ ಗತಿಯಲ್ಲಿ ಸಾಗುತ್ತಿದೆ ಎಂದು ತಿಳಿಸಿದರು.
ಆಯುಷ್ಮಾನ್ ಭಾರತ್ -ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಅಡಿಯಲ್ಲಿ 55 ಕೋಟಿ ಫಲಾನುಭವಿಗಳಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ಮುರ್ಮು ಹೇಳಿದರು.
ಎಬಿ–ಎನ್‌ಎಚ್‌ಪಿಎಂ 50 ಕೋಟಿ ಜನರನ್ನು ಒಳಗೊಳ್ಳುವ ಯೋಜನೆಯಾಗಿದೆ. ಇದು ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
Saval TV on YouTube