ಮನೆ ರಾಷ್ಟ್ರೀಯ ಫ್ರಾನ್ಸ್ ಅಧ್ಯಕ್ಷ  ಇಮಾನ್ಯುಯಲ್ ಮ್ಯಾಕ್ರನ್ ಈ ಬಾರಿಯ ಗಣರಾಜ್ಯೋತ್ಸವಕ್ಕೆ ಭಾರತದ ಮುಖ್ಯ ಅತಿಥಿ

ಫ್ರಾನ್ಸ್ ಅಧ್ಯಕ್ಷ  ಇಮಾನ್ಯುಯಲ್ ಮ್ಯಾಕ್ರನ್ ಈ ಬಾರಿಯ ಗಣರಾಜ್ಯೋತ್ಸವಕ್ಕೆ ಭಾರತದ ಮುಖ್ಯ ಅತಿಥಿ

0

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಈ ಬಾರಿಯ ಗಣರಾಜ್ಯೋತ್ವವ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ರನ್ನು ಆಹ್ವಾನಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೊದಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಗಣ ರಾಜ್ಯೋತ್ಸವದ ಮುಖ್ಯ ಅತಿಥಿಯಾಗುವಂತೆ ಆಹ್ವಾನ ನೀಡಲಾಗಿತ್ತು. ಆದರೆ, ಅವರು ಜನವರಿಯಲ್ಲಿ ಭಾರತಕ್ಕೆ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ ನಂತರ ಫ್ರಾನ್ಸ್ ಅಧ್ಯಕ್ಷರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು, ಅವರೇ ಈ ಬಾರಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಅಂದಹಾಗೆ ಫ್ರಾನ್ಸ್ ಜೊತೆ ಭಾರತ ಸಾಕಷ್ಟು ಯೋಜನೆಗಳಲ್ಲಿ ಒಪ್ಪಂದಗಳನ್ನು ಮಾಡಿಕೊಂಡಿದ್ದು, ಈ ಪೈಕಿ ಗೇಮ್ ಚೇಂಜರ್ ಎಂದೇ ಪರಿಗಣಿಸಲಾಗುತ್ತಿರುವ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕೂಡ ಸೇರಿದೆ. ಭಾರತ ಮತ್ತು ಫ್ರಾನ್ಸ್ ದೇಶಗಳು 36 ರಾಫೆಲ್ ಯುದ್ಧ ವಿಮಾನ ವ್ಯವಹಾರ ಒಪ್ಪಂದಕ್ಕೆ 23 ಸೆಪ್ಟಂಬರ್ 2016ರಂದು ಸಹಿ ಹಾಕಿದ್ದವು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫ್ರಾನ್ಸ್ ಹಾಗೂ ಯುಎಇ ಪ್ರವಾಸಕ್ಕೆ ಹೊರಟ ಸಂದರ್ಭದಲ್ಲಿ ಭಾರತದ ರಕ್ಷಣಾ ಸಚಿವಾಲಯ ಫ್ರಾನ್ಸ್‌ನಿಂದ ಹೊಸದಾಗಿ 26 ರಫೇಲ್ ಯುದ್ಧ ವಿಮಾನ ಖರೀದಿ ಹಾಗೂ 3 ಸ್ಕಾರ್ಪಿಯನ್ ದರ್ಜೆಯ ಸಾಂಪ್ರದಾಯಿಕ ಸಬ್‌ಮೆರಿನ್‌ಗಳನ್ನು ಖರೀದಿ ಮಾಡಲು ಸಮ್ಮತಿ ಸೂಚಿಸಿತ್ತು.