ಮನೆ ರಾಜ್ಯ ಬಿಜೆಪಿಯಿಂದ ಕೆ.ಎಸ್. ಈಶ್ವರಪ್ಪ ಉಚ್ಛಾಟನೆ

ಬಿಜೆಪಿಯಿಂದ ಕೆ.ಎಸ್. ಈಶ್ವರಪ್ಪ ಉಚ್ಛಾಟನೆ

0

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಆರು ವರ್ಷಗಳಿಗೆ ಉಚ್ಚಾಟನೆ ಮಾಡಲಾಗಿದೆ.

Join Our Whatsapp Group

ನಾಮಪತ್ರ ಹಿಂದಕ್ಕೆ ಪಡೆಯಲು ಸೋಮವಾರ ಕಡೆಯ ದಿನವಾಗಿತ್ತು. ನಾಮಪತ್ರವನ್ನು ಹಿಂದಕ್ಕೆ ಪಡೆಯದ ಕಾರಣ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ ಅವರು ಉಚ್ಚಾಟನಾ ಆದೇಶ ಹೊರಡಿಸಿದ್ದಾರೆ. `ಪಕ್ಷದ ಸೂಚನೆಯನ್ನು ಕಡೆಗಣಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

ತಮ್ಮ ಪುತ್ರನಿಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ನೀಡಲಿಲ್ಲ ಎಂದು ಮುನಿಸಿಕೊಂಡ ಈಶ್ವರಪ್ಪ, ಶಿವಮೊಗ್ಗ ಕ್ಷೇತ್ರದಲ್ಲಿ ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ತಮಗೆ ಟಿಕೆಟ್ ಸಿಗದೇ ಇರುವುದಕ್ಕೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರೇ ಕಾರಣ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಬಿಜೆಪಿ ಉಚ್ಚಾಟನೆಗೆ ನಾನು ಹೆದರುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಬಿಜೆಪಿಗೆ ಹೋಗುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಚ್ಚಾಟನೆಯ ಆದೇಶ ನನಗೆ ಇನ್ನೂ ತಲುಪಿಲ್ಲ. ಮಾಧ್ಯಮಗಳ ಮೂಲಕ ನನಗೆ ಗೊತ್ತಾಗಿದೆ. ಅಪ್ಪ, ಮಕ್ಕಳು ಆರಂಭದಿಂದ ಸುಳ್ಳು ಹೇಳುತ್ತಾ ಬಂದಿದ್ದಾರೆ. ಅವರು ಷಡ್ಯಂತ್ರ ಮಾಡುತ್ತಾ ಬಂದರು. ಅವರು ಯಾವ ಮುಖ ಇಟ್ಟುಕೊಂಡು ಉತ್ತರ ನೀಡುತ್ತಾರೆ. ಅವರು ಪ್ರಕ್ರಿಯೆ ನೀಡಲಿ, ನಂತರ ನಾನು ಅವರಿಗೆ ಉತ್ತರ ನೀಡುತ್ತೇನೆ ಎಂದರು.

ನನ್ನ ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೆ. ಅದರಂತೆ ನಾಮಪತ್ರ ಹಿಂತೆಗೆದುಕೊಳ್ಳದೇ ಕಣದಲ್ಲೇ ಉಳಿದಿದ್ದೇನೆ. ಬಿರುಸಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳುವೆ ಎಂದು ಈಶ್ವರಪ್ಪ ಮಾಧ್ಯಮದವರಿಗೆ ಸ್ಪಷ್ಟಪಡಿಸಿದರು.

ಹಿಂದಿನ ಲೇಖನಲೋಕಸಭೆ ಚುನಾವಣೆ: ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್
ಮುಂದಿನ ಲೇಖನಬಿಜೆಪಿ ಎಂಎಲ್ ​ಸಿ ಕೆಪಿ ನಂಜುಂಡಿ ರಾಜೀನಾಮೆ: ನಾಳೆ ಕಾಂಗ್ರೆಸ್ ಸೇರ್ಪಡೆ