ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ.
ರಾಜಸ್ತಾನದ ಸಿಕರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತಿನ ಹಣ ಬಿಡುಗಡೆಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಪ್ರಧಾನಿ ಮೋದಿ, 9 ಕೋಟಿ ರೈತರ ಖಾತೆಗೆ 20 ಸಾವಿರ ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ರೈತರ ಕಷ್ಟ ಸುಖ ಆಲಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಭಾರತ ಸರ್ಕಾರವು ವಾರ್ಷಿಕವಾಗಿ 6 ಸಾವಿರ ರೂ.ಗಳನ್ನು ಮೂರು ವಿಭಿನ್ನ ಕಂತುಗಳಲ್ಲಿ ರೈತರ ಖಾತೆ ಹಾಕುತ್ತಿದೆ. ಇದಕ್ಕಾಗಿ 14 ನೇ ಕಂತು ನಡೆಯುತ್ತಿದೆ.