ಬೆಳಗಾವಿ(Belagavi): ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಶೇ.40 ರಷ್ಟು ಲಂಚದ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ(Contractor) ಸಂತೋಷ್ ಪಾಟೀಲ್(Santhosh patil) ಅವರ ಅಂತ್ಯಕ್ರಿಯೆ(Funeral) ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ನೆರವೇರಿತು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹಾಗೂ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಅನೇಕರು ಸಂತೋಷ್ ಮೃತದೇಹದ ಅಂತಿಮ ದರ್ಶನ ಪಡೆದರು.
ಉಡುಪಿಯಿಂದ ಸಂತೋಷ್ ಮೃತದೇಹವನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಸಾಗಿಸಲಾಯಿತು. ಮೃತದೇಹ ನೋಡುತ್ತಿದ್ದಂತೆ ಕುಟುಂಬದವರು ಹಾಗೂ ಬಂಧುಗಳ ಆಕ್ರಂದನ ಮುಗಿಲು ಮುಟ್ಟಿತ್ತು.
ಸಂತೋಷ್ ಪಾಟೀಲ ಕುಟುಂಬದವರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಮುಖಂಡ ಅಡಿವೇಶ ಇಟಗಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಥವಾ ಬಿಜೆಪಿ ನಾಯಕರು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದಿದ್ದರು. ಇದರಿಂದಾಗಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.