ಮನೆ ಅಂತಾರಾಷ್ಟ್ರೀಯ ಜಿ–20 ಶೃಂಗಸಭೆ: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ

ಜಿ–20 ಶೃಂಗಸಭೆ: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ

0

ಇಂಡೊನೇಷ್ಯಾ: ಜಿ–20 ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಉಭಯ ದೇಶಗಳ ಪಾಲುದಾರಿಕೆ, ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದರು.

ನವೀನ ತಂತ್ರಜ್ಞಾನ, ಕೃತಕಬುದ್ಧಿಮತ್ತೆ ಕ್ಷೇತ್ರಗಳಲ್ಲಿನ ಪಾಲುದಾರಿಕೆ. ವ್ಯೂಹಾತ್ಮಕವಾಗಿ ಮುಖ್ಯವಾಗಿರುವ ಕ್ವಾಡ್‌ ಹಾಗೂ ಐ2ಯು2 (ಇಂಡಿಯಾ, ಇಸ್ರೇಲ್, ಯುಎಎಸ್‌ ಹಾಗೂ ಯುಎಇ) ಗುಂಪುಗಳ ಕಾರ್ಯನಿರ್ವಹಣೆಯಲ್ಲಿ ಭಾರತ ಮತ್ತು ಅಮೆರಿಕ ನೀಡುತ್ತಿರುವ ಸಹಕಾರದ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೂ ಪ್ರಧಾನಿ ಮೋದಿ ಮಾತುಕತೆ ನಡೆಸಿದರು ಎಂದು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಟ್ವೀಟ್‌ ಮಾಡಿದೆ.