ಗದಗ: ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವಂತಹ ಘಟನೆ ಗದಗನ ಬೆಟಗೇರಿಯ ಹುಯಿಲಗೋಳ ರಸ್ತೆಯಲ್ಲಿ ಫೆಬ್ರವರಿ 8 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹಲ್ಲೆಗೊಳಗಾದ ಯುವಕ ತೇಜಸ್(20) ಮೇಹರವಾಡಿ ಸದ್ಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.
ಸಹೋದರಿಗೆ ಯಾಕೆ ಚುಡಾಯಿಸುತ್ತೀರಿ ಅಂತ ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಆರೋಪ ಮಾಡಲಾಗಿದೆ. ಎಂಟು ಯುವಕರ ಗುಂಪಿನಿಂದ ಅಟ್ಯಾಕ್ ಮಾಡಿದ್ದು, ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಲಾಗಿದೆ.
ಪುಡಿರೌಡಿಗಳ ಅಟ್ಟಹಾಸಕ್ಕೆ ಗದಗ-ಬೆಟಗೇರಿ ಅವಳಿ ನಗರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.