ಮನೆ ಅಪರಾಧ ಗದಗ: ಪತ್ನಿ ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಪತಿ, ಕುಟುಂಬಸ್ಥರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

ಗದಗ: ಪತ್ನಿ ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಪತಿ, ಕುಟುಂಬಸ್ಥರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

0

ಗದಗ: ಪತ್ನಿಯನ್ನು ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಮಹಿಳೆಯ ಪತಿ ಹಾಗೂ ಕುಟುಂಬದವರ ಮೇಲೆ ಕೊಡಲಿ, ದೊಣ್ಣೆಗಳಿಂದ ಹಲ್ಲೆ  ಮಾಡಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಾರೂಗೇರಿ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ಬೋವಿ ಸಮುದಾಯದ ದಲಿತ ಕುಟುಂಬದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದ್ದು ಕುರುಬ ಸಮುದಾಯಕ್ಕೆ ಸೇರಿದ 6 ಜನರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಇನ್ನು ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಿಡಿಗೇಡಿಗಳು ತನ್ನ ಪತ್ನಿ ಶೋಭಾಳನ್ನು ಚುಡಾಯಿಸುತ್ತಿದ್ದಾರೆ ಎಂದು ಪ್ರಶ್ನೆ ಮಾಡಲು ಹೋದ ದೇವರಾಜ್ ಅವರನ್ನು ಹಾಗೂ ಕುಟುಂಬದವರಾದ ಚಂದ್ರಪ್ಪ, ದಾನಪ್ಪ, ಚಂದ್ರಮ್ಮ, ಭಾಗ್ಯಮ್ಮರ ಮೇಲೆ ಹಲ್ಲೆ ನಡೆಸಿದ್ದಾರೆ. ಬಸವರಾಜ, ರವಿ, ಕೋಟೆಪ್ಪ, ಮುತ್ತಪ್ಪ ಸೇರಿದಂತೆ 6 ಜನರ ವಿರದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಗ್ರಾಮಸ್ಥರ ಎದುರಲ್ಲೇ ‌ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.