ಮನೆ ಅಪರಾಧ ಗದಗ : ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

ಗದಗ : ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

0

ಗದಗ : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯವೊಂದು ನಡೆದಿದ್ದು ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ ನಡೆದ ಘಟನೆ ಗದಗದಲ್ಲಿ ನಡೆದಿದೆ.

ಆರೋಪಿ ತಂದೆ ರಮೇಶ್ ಎಂಬಾತ ತನ್ನ 16 ವರ್ಷದ ಬಾಲಕಿ ಮೇಲೆ ಕಳೆದ 1 ವರ್ಷದಿಂದ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಸದ್ಯ ಈತನ ಮೇಲೆ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿ ಗರ್ಭಿಣಿ ಆಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ, ಆರೋಪಿ ತಂದೆ ರಮೇಶ್ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ಸಂಬಂಧ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.