ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇದೀಗ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಕೆಮಿಕಲ್, ಲ್ಯಾಬೋರೇಟರಿ, ಮೆಕ್ಯಾನಿಕಲ್, ಟೆಲಿಕಾಂ, ಇಲೆಕ್ಟ್ರಿಕಲ್, ಫೈಯರ್ ಮತ್ತು ಸೇಫ್ಟಿ, ಇನ್‌ಸ್ಟ್ರುಮೆಂಟೇಶನ್, ಸ್ಟೋರ್ ಮತ್ತು ಪರ್ಚೇಸ್, ಸಿವಿಲ್, ಫೈನಾನ್ಸ್ ಮತ್ತು ಅಕೌಂಟ್ಸ್, ಆಫೀಶಿಯಲ್ ಲಾಂಗ್ವೇಜ್, ಮಾರ್ಕೆಟಿಂಗ್, ಹೆಚ್‌ಆರ್ ಡಿಪಾರ್ಟ್‌ಮೆಂಟ್‌ಗಳಲ್ಲಿ ನೇಮಕ ಮಾಡಲಾಗುತ್ತದೆ.
ಉದ್ಯೋಗ ಸಂಸ್ಥೆ / ನಿಗಮ: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್
ಹುದ್ದೆ ಹೆಸರು : ನಾನ್ ಎಕ್ಸಿಕ್ಯೂಟಿವ್
ಹುದ್ದೆಗಳ ಸಂಖ್ಯೆ : 282
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್
ಆನ್‌ಲೈನ್ ಅರ್ಜಿ ಸಲ್ಲಿಸುವ ಆರಂಭ ದಿನಾಂಕ: 16-08-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15-09-2022
ವಿದ್ಯಾರ್ಹತೆ: ಹುದ್ದೆಯ ವಿಭಾಗಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಪದವಿ / ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು.
ಅರ್ಜಿ ಸಲ್ಲಿಕೆ ಹೇಗೆ?:
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://gailonline.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು. ಸದರಿ ವೆಬ್‌ಸೈಟ್‌ನಲ್ಲಿ ‘Career’ ಸೆಕ್ಷನ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾವು ಈಗ ಶಾರ್ಟ್ ನೋಟಿಫಿಕೇಶನ್ ಅಷ್ಟೆ ಬಿಡುಗಡೆ ಮಾಡಿದ್ದು, ದಿನಾಂಕ 16-08-2022 ರಂದು ಡೀಟೇಲ್ಡ್ ನೋಟಿಫಿಕೇಶನ್ ಬಿಡುಗಡೆ ಮಾಡಲಿದೆ. ಅದರಲ್ಲಿ ಅಭ್ಯರ್ಥಿಗಳು ಹುದ್ದೆಗೆ ನಿಗಧಿತ ಅರ್ಹತೆಗಳು, ವಯೋಮಿತಿ ಅರ್ಹತೆಗಳು, ಆಯ್ಕೆ ವಿಧಾನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಗಳನ್ನು ತಿಳಿಯಬಹುದು.