ಮನೆ ಸುದ್ದಿ ಜಾಲ ಸಾವಿನ ಬಳಿಕ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ನರ್ಸ್ ಗಾನವಿ

ಸಾವಿನ ಬಳಿಕ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ನರ್ಸ್ ಗಾನವಿ

0

ಚಿಕ್ಕಮಗಳೂರು : ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಗಾನವಿಗೌಡ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡು ಸಾವನ್ನಪ್ಪಿದ ಯುವತಿ ಗಾನವಿಗೌಡ (22) ರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕಟ್ಟಿನಮನೆ ಸಮೀಪದ ಮಕ್ಕಿ ಮನೆಯ ಯುವತಿ ಗಾನವಿಗೌಡ (22) ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದರು. ಕಳೆದ ವಾರ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಕುಸಿದು ಬಿದ್ದಿದ್ದರು.

ಕೂಡಲೇ ಆಕೆಯನ್ನು ತಪಾಸಣೆ ನಡೆಸಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ ವೈದ್ಯರು ಗಾನವಿಗೌಡರ ಮೆದುಳು ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಎಂದು ದೃಢಪಡಿಸಿದ್ದರು.

ಇದರಿಂದ ಆಕೆಯನ್ನು ಬದುಕುಳಿಸುವುದು ಕಷ್ಟ ಎಂದು ಕುಟುಂಬದ ಸದಸ್ಯರಲ್ಲಿ ತಿಳಿಸಿದ್ದಾರೆ. ಬಳಿಕ ಕುಟುಂಬಸ್ಥರು ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡ ನರ್ಸ್​ ಗಾನವಿ ದೇಹದಾನಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡ ನರ್ಸ್​ ಗಾನವಿ ದೇಹದಾನಇತರರ ಬಾಳಿಗೆ ಬೆಳಕಾದ ಗಾನವಿ : ಗಾನವಿಗೌಡ ಬದುಕುಳಿಯುವುದಿಲ್ಲ ಎಂದು ತಿಳಿದ ಬಳಿಕ ವೈದ್ಯರು, ಹೃದಯ, ಕಿಡ್ನಿ, ಕಣ್ಣು, ಲಿವರ್​ ಅನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಗಾನವಿಗೌಡ ಸಾವಿನಲ್ಲೂ ಇತರರ ಬಾಳಿಗೆ ಬೆಳಕಾಗಿದ್ದಾರೆ.

ಹಿಂದಿನ ಲೇಖನರಾಷ್ಟ್ರಧ್ವಜವನ್ನು ಅವಮಾನಿಸಿರುವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ
ಮುಂದಿನ ಲೇಖನಹರವೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಿರಂಜನ್‌ಕುಮಾರ್ ಚಾಲನೆ