ಮನೆ ಅಪರಾಧ ಬೆಳ್ಳೂರು ಪಟ್ಟಣದಲ್ಲಿ ಗುಂಪು ಘರ್ಷಣೆ: ಮೂರು ಪ್ರತ್ಯೇಕ ದೂರು ದಾಖಲು

ಬೆಳ್ಳೂರು ಪಟ್ಟಣದಲ್ಲಿ ಗುಂಪು ಘರ್ಷಣೆ: ಮೂರು ಪ್ರತ್ಯೇಕ ದೂರು ದಾಖಲು

0

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಘಟನೆ ಸಂಬಂಧ ಮೂರು ಪ್ರತ್ಯೇಕ ದೂರು ದಾಖಲಾಗಿದೆ.

Join Our Whatsapp Group

ಹಲ್ಲೆಗೊಳಗಾದ ಅಭಿಲಾಷ್ ತಂದೆ ರಾಮು, ಅಭಿಲಾಷ್​ ಅತ್ತೆ ರಶ್ಮಿ ಹಾಗೂ ಮಂಜುಳಾ ಎಂಬುವವರು ಹಿಂದೂ ಸಂಘಟನೆ ಮುಖಂಡರೊಂದಿಗೆ ಠಾಣೆಗೆ ತೆರಳಿ ಮಂಡ್ಯ ಎಸ್‌ ಪಿ ಯತೀಶ್ ಸಮ್ಮುಖದಲ್ಲಿ ದೂರು ದಾಖಲು ಮಾಡಿದ್ದಾರೆ.

ಪೊಲೀಸರ ವಿರುದ್ಧವೂ ಕಂಪ್ಲೇಂಟ್

ಇನ್ನು ಘಟನೆ ಬಳಿಕ ದೂರು ಸ್ವೀಕರಿಸದ ಪೊಲೀಸರ ವಿರುದ್ಧವೂ ಕಂಪ್ಲೇಂಟ್ ದಾಖಲಿಸಿದ್ದಾರೆ. ಅಭಿಲಾಷ್ ಮೇಲೆ ಹಲ್ಲೆ, ರಶ್ಮಿ ಮನೆಗೆ ನುಗ್ಗಿ ದಾಂಧಲೆ ಹಾಗೂ ಮಂಜುಳಾಗೆ ರಸ್ತೆಯಲ್ಲಿ ಬೆದರಿಕೆ ಹಾಕಿದ ಬಗ್ಗೆಯೂ ಪ್ರತ್ಯೇಕ ದೂರು ನೀಡಿದ್ದು, ಮೊಹ್ಮದ್ ಹುಜೈಫ್, ಇಮ್ರಾನ್, ಸಮೀರ್ ಸೂಫಿಯಾನ್ ಮತ್ತು ಇರ್ಫಾನ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ.

ಘಟನೆ ವಿವರ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಓವರ್ ಟೇಕ್ ಮಾಡಲು ಹೋಗಿ ಬೈಕ್​ಗೆ ಟಚ್​ ಮಾಡಿರುವುದನ್ನು ಪ್ರಶ್ನಿಸಿದ್ದ ಅಭಿಲಾಷ್​ ಎಂಬುವವರಿಗೆ ಇಬ್ಬರು ಮುಸ್ಲಿಂ ಯುವಕರ ಗುಂಪೊಂದು ಇಂದು (ಮೇ 27) ಸಂಜೆ ಅಭಿಲಾಷ್​ ಮೇಲೆ ಹಲ್ಲೆ ಮಾಡಿತ್ತು. ಬಳಿಕ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಯುವಕರು, ಓರ್ವ ಮಹಿಳೆ ಮನೆ ಬಳಿ ದಾಂಧಲೆ, ನಡೆಸಿ ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿತ್ತು. ಈ ಘಟನೆ ಕುರಿತು ಇದೀಗ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.