ನವದೆಹಲಿ : ಸೀಲಾಂಪುರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕುಖ್ಯಾತ ರೌಡಿಶೀಟರ್ ಸಾವನ್ನಪ್ಪಿದ್ದಾನೆ. ಮೃತ ರೌಡಿಶೀಟರ್‌ನ್ನು ಮಿಸ್ಬಾ (22) ಎಂದು ಗುರುತಿಸಲಾಗಿದ್ದು, ಈತನ ಮೇಲೆ ಕೊಲೆ, ದರೋಡೆ ಸೇರಿದಂತೆ ಏಳು ಪ್ರಕರಣಗಳು ದಾಖಲಾಗಿದ್ದವು.
ಮಂಗಳವಾರ (ಅ.28) ರಾತ್ರಿ ಸೀಲಾಂಪುರದ ಜಾಮಾ ಮಸೀದಿಯ ಬಳಿಯ ದರೋಡೆಕೋರ ಛೇನು ಮನೆಯ ಬಳಿ ಪರಸ್ಪರ ಗುಂಡಿನ ದಾಳಿ ನಡೆದಿದೆ. ಅಪರಿಚಿತ ವ್ಯಕ್ತಿಗಳು ರೌಡಿಶೀಟರ್ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, 20 ಸುತ್ತು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕೂಡಲೇ ರೌಡಿಶೀಟರ್‌ನ್ನು ಜೆಪಿಸಿ ಆಸ್ಪತ್ರೆಗೆ ಸಾಗಿಸಿದರು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು. ಮೃತ ಮಿಸ್ಬಾ ಹಾಶಿಮ್ ಬಾಬಾ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿದ್ದು, ಇತ್ತೀಚಿಗೆ ಜೈಲಿನಿಂದ ಬಿಡುಗಡೆಯಾಗಿದ್ದ ಎಂದು ತಿಳಿದುಬಂದಿದೆ.
ಈ ಘಟನಾ ಸ್ಥಳದಲ್ಲಿ ವಿಧಿವಿಜ್ಞಾನ ತಂಡಗಳು ಸಾಕ್ಷ್ಯಗಳನ್ನು ಸಂಗ್ರಹಿಸಿವೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಹುಡುಕಾಟಕ್ಕೆ ದೆಹಲಿ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ.















