ಮನೆ ರಾಜ್ಯ ಬೆಂಗಳೂರಿನ ಪಬ್ ವೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಓರ್ವನಿಗೆ ಗಂಭೀರ ಗಾಯ

ಬೆಂಗಳೂರಿನ ಪಬ್ ವೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಓರ್ವನಿಗೆ ಗಂಭೀರ ಗಾಯ

0

ಬೆಂಗಳೂರು: ಕೋರಮಂಗಲದ ತಾವರೆಕೆರೆ ಮುಖ್ಯರಸ್ತೆಯೊಂದರಲ್ಲಿರುವ ಪಬ್ ವೊಂದರಲ್ಲಿ ಗ್ಯಾಸ್ ಸಿಲಿಂಡರ್ ಗಳು ಸ್ಫೋಟಗೊಂಡಿದ್ದು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಕಟ್ಟಡ ಮತ್ತು ವಾಹನಗಳಿಗೆ ಭಾರಿ ಪ್ರಮಾಣದ ಹಾನಿಯಾಗಿದೆ.

ಅತ್ಯಂತ ಜನನಿಭಿಡ ಪ್ರದೇಶದಲ್ಲಿ ಅವಘಡ ನಡೆದಿದ್ದು, ಪಬ್ ನ ಕೋಣೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದ್ದು, ಈ ವೇಳೆ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪ್ರೇಮ್ ಸಿಂಗ್ ಎಂಬ ಯುವಕ ಪ್ರಾಣ ಉಳಿಸಿಕೊಳ್ಳುವ ಸಲುವಾಗಿ ನಾಲ್ಕು ಅಂತಸ್ತಿನ ಕಟ್ಟಡದಿಂದ ಕೆಳಗ್ಗೆ ಜಿಗಿದಿದ್ದಾನೆ. ಈ ದೃಶ್ಯ ಅನತಿ ದೂರದ ಕಟ್ಟದಲ್ಲಿದ್ದವರು ಮೊಬೈಲ್ ಗಳಲ್ಲಿ ಸೆರೆ ಹಿಡಿದಿದ್ದಾರೆ.

ಪ್ರೇಮ್ ಸಿಂಗ್ ನನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ದೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪಬ್ ಮತ್ತು ಕೆಳಗಿದ್ದ ವಾಹನಗಳಿಗೆ ಭಾರಿ ಪ್ರಮಾಣದ ಹಾನಿಯುಂಟಾಗಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕಟ್ಟಡದ ಕೊನೆಯಲ್ಲಿ ಹತ್ತಕ್ಕೂ ಹೆಚ್ಚು ಸಿಲಿಂಡರ್ ಗಳಿರುವುದು ಕಂಡು ಬಂದಿದೆ. ಏಕಾಏಕಿ ಭಾರಿ ಬೆಂಕಿ ಮತ್ತು ಹೊಗೆಯನ್ನು ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ.

ಹಿಂದಿನ ಲೇಖನಕಲಿಯುವುದು ಮತ್ತು ಕಲಿಕೆಯನ್ನು ಗಳಿಸಿಕೊಳ್ಳುವುದು
ಮುಂದಿನ ಲೇಖನಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು