ವಿಶಾಖಪಟ್ಟಣ(Vishakha pattana): ಬ್ರಾಂಡಿಕ್ಸ್ ಎಸ್ಇಝೆಡ್ನಲ್ಲಿರುವ ಕಾರ್ಖಾನೆಯ ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆ ಉಂಟಾಗಿದ್ದು, 50ಕ್ಕೂ ಅಧಿಕ ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಆಂದ್ರಪ್ರದೇಶದಲ್ಲಿ ನಡೆದಿದೆ.
ಉಡುಪು ತಯಾರಿಕಾ ಘಟಕದಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಅನಿಲ ಸೋರಿಕೆಯಿಂದಾಗಿ ಅಸ್ವಸ್ಥಗೊಂಡ ಕಾರ್ಮಿಕರನ್ನು ಸ್ಥಳೀಯ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಿಲ ಸೋರಿಕೆಗೆ ತಕ್ಷಣದ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಜೂನ್ 3ರಂದು ಇದೇ ಪ್ರದೇಶದಲ್ಲಿ ಅನಿಲ ಸೋರಿಕೆ ಉಂಟಾಗಿ 200ಕ್ಕೂ ಅಧಿಕ ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿದ್ದರು. ಕಾರ್ಖಾನೆ ಸಮೀಪದ ಪೋರಸ್ ಲ್ಯಾಬೋರೇಟರಿ ಘಟಕದಿಂದ ಅಮೋನಿಯಾ ಅನಿಲ ಸೋರಿಕೆಯಾಗಿ ಸಮಸ್ಯೆಯಾಗಿತ್ತು ಎಂದು ಹೇಳಲಾಗಿತ್ತು.