ಮನೆ ರಾಜ್ಯ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಫೋಟ..!

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಫೋಟ..!

0

ಶಿವಮೊಗ್ಗ : ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಾಗರ ತಾಲೂಕಿನ ಡಿಗಟೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡ ಯುವಕ ಲೋಕೇಶ್‌ಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಸ್ತಿಕಂಬ ಗಣೇಶೋತ್ಸವ ಸಮಿತಿಯ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಈ ಅವಘಡ ಸಂಭವಿಸಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.