ಸೋಲೂರು: ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಸೌರ ಶಕ್ತಿ ಚಾಲಿತ ಪಂಪ್ ಸೆಟ್ಗಳನ್ನು ಪರಿಶೀಲಿಸಿದ ಬಳಿಕ ರೈತರ ಜತೆ ಇಂಧನ ಸಚಿವ ಕೆ.ಜೆ ಜಾರ್ಜ್ ಬುಧವಾರ ಸಂವಾದ ನಡೆಸಿದರು.
ಶುದ್ಧ ಮತ್ತು ಹಸಿರು ಇಂಧನದ ಬಳಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಗ್ರಾಮಕ್ಕೆ ಭೇಟಿ ನೀಡಿದ ಇಂಧನ ಸಚಿವರು,”ದೇಶದ ಪ್ರಗತಿಯಲ್ಲಿ ಇಂಧನ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ, ಅದನ್ನು ಅತ್ಯಂತ ಪರಿಣಾಮಕಾರಿ ರೀತಿಯಲ್ಲಿ ಸಂರಕ್ಷಿಸಬೇಕು,”ಎಂದರು.
“ಸೌರಶಕ್ತಿ ಚಾಲಿತ ಪಂಪ್ಗಳ ಅಳವಡಿಕೆ ಸುಲಭವಾಗಿದ್ದು, ದೀರ್ಘಕಾಲ ಬಾಳಿಕೆ ಬರುತ್ತವೆ. ಜತೆಗೆ, ಕಾರ್ಯಾಚರಣೆ ಮತ್ತು ನಿರ್ವಹಣೆ ವೆಚ್ಚ ಕಡಿಮೆ ಇರುವ ಕಾರಣ ಗ್ರಾಮೀಣ ಪ್ರದೇಶಗಳಲ್ಲಿ ಸೌರಶಕ್ತಿ ಬಳಕೆ ಹೆಚ್ಚು ಜನಪ್ರಿಯವಾಗಿದೆ,”ಎಂದು ಸಚಿವರು ಹೇಳಿದರು.
ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರದ ಧನ ಸಹಾಯದೊಂದಿಗೆ ರಾಜ್ಯದಲ್ಲಿ 2014-15ರಲ್ಲಿ ಸೌರ ಚಾಲಿತ ಪಂಪ್ ಸೆಟ್ ಯೋಜನೆ ಪ್ರಾರಂಭಿಸಲಾಯಿತು.
ಇಂಧನ ಮತ್ತು ಮೂಲಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹಾಗೂ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರೈತರಿಗೆ ಲಾಭ
ಸೌರಶಕ್ತಿ ಚಾಲಿತ ನೀರಾವರಿ ಪಂಪ್ ಸೆಟ್ಗಳ ಬಳಕೆಯಿಂದ ನಿರಂತರ ವಿದ್ಯುತ್ ಪೂರೈಕೆಯ ಖಾತರಿ ಜತೆಗೆ ಸಾಂಪ್ರದಾಯಿಕ ವಿದ್ಯುತ್ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. ಮುಖ್ಯವಾಗಿ ರೈತರ ಖರ್ಚು ಮಾಡುತ್ತದೆ. ನವೀಕರಿಸಬಹುದಾದ ಇಂಧನ ಮತ್ತು ಇಂಧನ ಸಂರಕ್ಷಣೆಗಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಸೌರಶಕ್ತಿ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿದೆ.
ಪ್ರಧಾನ ಮಂತ್ರಿ ಕುಸುಮ್ ಯೋಜನೆಯಡಿ ಗ್ರಿಡ್ ಪೂರೈಕೆ ಲಭ್ಯವಿಲ್ಲದಿರುವಲ್ಲಿ ಡೀಸೆಲ್ ಕೃಷಿ ಪಂಪ್ಗಳು/ನೀರಾವರಿ ವ್ಯವಸ್ಥೆ ಬದಲಿಗೆ 7.5 ಹೆಚ್ಪಿ ವರೆಗಿನ ಸೌರ ಕೃಷಿ ಪಂಪ್ ಸೆಟ್ಗಳನ್ನು ಸ್ಥಾಪಿಸಲು ರೈತರಿಗೆ ಹಣಕಾಸಿನ ನೆರವು ನೀಡಲಾಗುತ್ತದೆ.