ಜಮ್ಮು(Jammu): ಹಿರಿಯ ರಾಜಕಾರಣಿ ಗುಲಾಮ್ ನಬಿ ಆಜಾದ್ ಅವರು ಹೊಸದಾಗಿ ಸ್ಥಾಪಿಸಿರುವ ಡೆಮಾಕ್ರೆಟಿಕ್ ಆಜಾದ್ ಪಕ್ಷದ (ಡಿಎಪಿ) ಅಧ್ಯಕ್ಷರಾಗಿ ಆಜಾದ್ ಅವರೇ ಚುನಾಯಿತರಾದರು ಎಂದು ಪಕ್ಷದ ಮುಖಂಡರೊಬ್ಬರು ಶನಿವಾರ ತಿಳಿಸಿದರು.
ಪಕ್ಷದ ಸಂಸ್ಥಾಪಕ ಮಂಡಳಿ ಸಭೆಯಲ್ಲಿ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದ ಗೊತ್ತುವಳಿಯನ್ನು ಹೊರಡಿಸಲಾಗಿತ್ತು. ಆಜಾದ್ ಅವರು ಅವಿರೋಧವಾಗಿ ಆಯ್ಕೆಯಾದರು ಎಂದು ಅವರು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ತೊರೆದಿದ್ದ ಆಜಾದ್ ಅವರು ತಮ್ಮ ಬೆಂಬಲಿಗರ ಜೊತೆ ಸೇರಿ ಸೆಪ್ಟೆಂಬರ್ 26 ರಂದು ಹೊಸ ಪಕ್ಷವನ್ನು ಸ್ಥಾಪಿಸಿದ್ದರು.