ಮನೆ ಅಪರಾಧ ಚಾಕೊಲೇಟ್ ತಿನ್ನುವಾಗ ಉಸಿರುಗಟ್ಟಿ ಬಾಲಕಿ ಸಾವು

ಚಾಕೊಲೇಟ್ ತಿನ್ನುವಾಗ ಉಸಿರುಗಟ್ಟಿ ಬಾಲಕಿ ಸಾವು

0

ಉಡುಪಿ(udupi):  ಚಾಕೊಲೇಟ್ ತಿನ್ನುವ ಸಂದರ್ಭದಲ್ಲಿ ಉಸಿರುಗಟ್ಟಿ ಬಾಲಕಿ ಸಾವನ್ನಪಿರುವ ಘಟನೆ ಬೈಂದೂರು ತಾಲೂಕಿನ ಬವಳಾಡಿ ಗ್ರಾಮದಲ್ಲಿ ನಡೆದಿದೆ.

ಸಮನ್ವಿ(6) ಮೃತಪಟ್ಟ ಬಾಲಕಿ. ಸಮನ್ವಿ ಉಪ್ಪುಂದದ ಆಂಗ್ಲ ಮಾಧ್ಯಮ ಶಾಲೆಯೊಂದರ ವ್ಯಾಸಂಗ ಮಾಡುತ್ತಿದ್ದು, ಶಾಲಾ ಬಸ್‌ ಗೆ ಕಾಯುತ್ತಿದ್ದಾಗ ಚಾಕೊಲೇಟ್‌ ತಿಂದಿದ್ದಾಳೆ. ಈ ವೇಳೆ ಬಾಲಕಿ ಚಾಕಲೇಟ್ ನುಂಗಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.

ಸಮನ್ವಿ ಶಾಲೆಗೆ ಹೋಗಲ್ಲ ಎಂದು ಹಠ ಮಾಡುತ್ತಿದ್ದ ಕಾರಣಕ್ಕೆ ಪೋಷಕರು ಚಾಕಲೇಟ್ ಕೊಟ್ಟು ಶಾಲೆಗೆ ಕಳುಹಿಸುತ್ತಿದ್ದಾರೆ. ಇಂದು ಬಾಲಕಿಯ ತಾಯಿ ಶಾಲಾ ಬಸ್ ಹತ್ತಿಸುತ್ತಿದ್ದಂತೆ ಬಾಲಕಿ ಕುಸಿದು ಬಿದ್ದಿದ್ದಾಳೆ. ಬಾಲಕಿ ಬೀಳುತ್ತಿದ್ದಂತೆ ಬಾಯಿಂದ ಚಾಕಲೇಟ್ ಹೊರಗೆ ಬಿದ್ದಿದೆ. ನಂತರ ಆಸ್ಪತ್ರೆ ತೆರಳುವ ಮಧ್ಯದಲ್ಲಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಹಿಂದಿನ ಲೇಖನಶೀತ, ಕೆಮ್ಮಿನ ತಕ್ಷಣ ಪರಿಹಾರಕ್ಕೆ ಲವಂಗ ಸಹಕಾರಿ
ಮುಂದಿನ ಲೇಖನಸ್ಥಳೀಯ ಸಂಸ್ಥೆಗಳ ಚುನಾವಣೆ: ಸರ್ವೋಚ್ಚ ನ್ಯಾಯಾಲಯದಲ್ಲಿ ಜುಲೈ 22 ರಂದು ಅರ್ಜಿ ಸಲ್ಲಿಕೆ; ಸಿಎಂ ಬಸವರಾಜ ಬೊಮ್ಮಾಯಿ