ಕೋಲಾರ: 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ತಾಲ್ಲೂಕಿನ ತೋರ್ನಹಳ್ಳಿ ಗ್ರಾಮದ ಮಹೇಶ್ ಎಂಬ ಯುವಕನಿಗೆ ಇಲ್ಲಿನ ಪೋಕ್ಸೊ ವಿಶೇಷ ನ್ಯಾಯಾಲಯ 20ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕೋವಿಡ್ ಸಂದರ್ಭದಲ್ಲಿ ರಜೆ ಕಾರಣ ಮನೆಯಲ್ಲಿದ್ದ ಬಾಲಕಿಗೆ ತಿಂಡಿಕೊಡಿಸುವುದಾಗಿ ಹೇಳಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ.
ಗರ್ಭಿಣಿಯಾಗಿದ್ದ ಬಾಲಕಿಯ ಹೇಳಿಕೆಯನ್ನು ಮಾಲೂರು ೊಲೀಸರು 2021ರ ಆಗಸ್ಟ್ 27ರಂದು ಪಡೆದಿದ್ದರು.
ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡು ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆಯನ್ನು ಸೋಮವಾರ ನಡೆಸಿದ ನ್ಯಾಯಾಧೀಶ ಬಿ.ಪಿ.ದೇವಮಾನೆ ಅವರುಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 25ಸಾವಿರ ದಂಡ ವಿಧಿಸಿದ್ದಾರೆ. ಜೊತೆಗೆ ಬಾಲಕಿಗೆ 5 ಲಕ್ಷ ಪರಿಹಾರ ನೀಡಿ ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ.ಲಲಿತಕುಮಾರಿ ವಾದ ಮಂಡಿಸಿದ್ದರು.