ಮನೆ ಅಪರಾಧ ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನ್ಯಾಪ್ ಮಾಡಿ ಬಿಯರ್ ಕುಡಿಸಿ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನ್ಯಾಪ್ ಮಾಡಿ ಬಿಯರ್ ಕುಡಿಸಿ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

0

ಕೊಪ್ಪಳ: ಬಳ್ಳಾರಿಯ ಕಾಲೇಜು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್ ಮಾಡಿ ಕೊಪ್ಪಳಕ್ಕೆ ಕರೆತಂದು ಬಿಯರ್ ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ಸಣಾಪುರ ಬಳಿಯ ಹೋಟೆಲ್​  ನಲ್ಲಿ ಅತ್ಯಾಚಾರ ಎಸಗಲಾಗಿದ್ದು, ಆರೋಪಿಗಳಾದ ನವೀನ್, ಸಾಕೀಬ್, ತನು ಸೇರಿದಂತೆ ನಾಲ್ವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಬಿಕಾಂ ವ್ಯಾಸಾಂಗ ವ್ಯಾಸಾಂಗ ಮಾಡುತ್ತಿದ್ದ ಯುವತಿ ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿದ್ದಳು. ಈ ವೇಳೆ ಅಣ್ಣ ಬಂದಿರುವುದಾಗಿ ಹೇಳಿದಾಗ ವಿದ್ಯಾರ್ಥಿನಿ ಕಾಲೇಜಿನಿಂದ ಹೊರಗಡೆ ಹೋಗಿದ್ದಾಳೆ. ಈ ವೇಳೆ ಆರೋಪಿಗಳು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್ ಮಾಡಿ ಕೊಪ್ಪಳ ಜಿಲ್ಲೆಯ ಸಣಾಪುರ ಬಳಿಯ ಅಂತರಾಳ ಕೆಫೆ ಹೋಟೆಲ್​ ಗೆ ಕರೆದೊಯ್ದಿದ್ದಾರೆ.

ಬಳಿಕ ಬಿಯರ್ ಕುಡಿಸಿ ಮತ್ತು ಬರಿಸಿದ ಆರೋಪಿಗಳು ಆಕೆಯ ಮೇಲೆ ಸ್ನೇಹಿತ ಸೇರಿದಂತೆ ನಾಲ್ವರು ಅತ್ಯಾಚಾರ ಎಸಗಿದ್ದಾರೆ. ಘಟನೆ ಸಂಬಂಧ ಸಂತ್ರಸ್ತ ಯುವತಿಯು ಬಳ್ಳಾರಿ ನಗರದ ಕೌಲ್ ಬಜಾರ್​ ನ ನವೀನ್, ಸಾಕೀಬ್, ತನು ಸೇರಿದಂತೆ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ಹಿಂದಿನ ಲೇಖನಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ಮುಂದಿನ ಲೇಖನದಸರಾ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಪಂ. ರಾಜೀವ್ ತಾರಾನಾಥ್ ಅವರಿಂದ ಕಮೀಷನ್ ಕೇಳಿದ ಅಧಿಕಾರಿಗಳು: ಆರೋಪ