ಮನೆ ಅಪರಾಧ ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

0

ಮಡಿಕೇರಿ: ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ಮಜ್ಜಿಗೆಹಳ್ಳ ನರ್ಸರಿ ಬಳಿ ನ.28ರ ಗುರುವಾರ ನಡೆದಿದೆ.

Join Our Whatsapp Group

ಸ್ಥಳೀಯ ನಿವಾಸಿ ರವಿ ಹಾಗೂ ಸಿಂಧು ದಂಪತಿ ಪುತ್ರಿ ಗಾನವಿ(6) ಮೃತ ದುರ್ದೈವಿ. ಈಕೆ ಮಜ್ಜಿಗೆಹಳ್ಳ ಪರಂಬು ಶಾಲೆಯ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಗೋಣಿಕೊಪ್ಪ ಕಡೆಯಿಂದ ಹುಣಸೂರು ಕಡೆಗೆ ತೆರಳುತ್ತಿದ್ದ ಲಾರಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಗಾನವಿಗೆ ಡಿಕ್ಕಿ ಹೊಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕ ಕನಕಪುರ ಮೂಲದ ಹರೀಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲಾರಿ ಡಿಕ್ಕಿ ಹೊಡೆದ ಸಂದರ್ಭ ಗಂಭೀರ ಗಾಯಗೊಂಡಿದ್ದ ಗಾನವಿಯನ್ನು ಸಾರ್ವಜನಿಕರು ಆಟೋ ರಿಕ್ಷಾದಲ್ಲಿ ತಿತಿಮತಿ ವಿವೇಕಾನಂದ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಳು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಗೋಣಿಕೊಪ್ಪ ವೃತ್ತನಿರೀಕ್ಷಕ ಶಿವರಾಜ್ ಆರ್. ಮುಧೋಳ್, ಠಾಣಾಧಿಕಾರಿ ಪ್ರದೀಪ್ ಕುಮಾರ್, ಎಎಸ್‍ಐ ದೇವರಾಜ್ ಸಿಬಂದಿಗಳಾದ ನೆಹರು, ಸೀರಿಲ್, ಭರತ್ ರಾಘವೇಂದ್ರ ಹಾಗೂ ಶುಭ ಮತ್ತಿತರರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಘಟನೆ ಕುರಿತು ತಿತಿಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.