ಮನೆ ರಾಜಕೀಯ ಎಸ್.ಎ.ರಾಮದಾಸ್ ಗೆ ಸಚಿವ ಸ್ಥಾನ ನೀಡಿ: ಎಂಎಲ್ ಸಿ ಹೆಚ್.ವಿಶ್ವನಾಥ್

ಎಸ್.ಎ.ರಾಮದಾಸ್ ಗೆ ಸಚಿವ ಸ್ಥಾನ ನೀಡಿ: ಎಂಎಲ್ ಸಿ ಹೆಚ್.ವಿಶ್ವನಾಥ್

0

ಮೈಸೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಜೋರಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ  ಪ್ರತಿಕ್ರಿಯಿಸಿರುವ  ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಎಸ್ ಎ ರಾಮದಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಎಂ.ಎಲ್.ಸಿ ಎಚ್ ವಿಶ್ವನಾಥ್ , ನಾನು ಸಚಿವ ಸ್ಥಾನದ ರೇಸ್‌ನಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮೈಸೂರು ಭಾಗಕ್ಕೆ ಒಂದು ಸಚಿವ ಸ್ಥಾನ ನೀಡಲೇಬೇಕು. ಹಿರಿಯರಾದ ಎಸ್ ಎ ರಾಮದಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಈ‌ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಗೆ ಒತ್ತಾಯ ಮಾಡುತ್ತೇನೆ. ಸುಧಾರಣೆಗಾಗಿ ಬದಲಾವಣೆಯಾಗಬೇಕು ಎಂದರು.

ಸಚಿವ ಸಂಪುಟ ವಿಸ್ತರಣೆಗೆ ಹಲವು ಶಾಸಕರು  ಪಟ್ಟು ಹಿಡಿದಿದ್ದು ಸಚಿವ ಸ್ಥಾನಗಿಟ್ಟಿಸಿಕೊಳ್ಳಲು ಶಾಸಕರಾದ ಎಂ.ಪಿರೇಣುಕಾಚಾರ್ಯ,  ಬಸನಗೌಡ ಪಾಟೀಲ್ ಯತ್ನಾಳ್, ಜಿ.ಹೆಚ್ ತಿಪ್ಪಾರೆಡ್ಡಿ ಸೇರಿ ಹಲವರು ಶಾಸಕರು ಲಾಬಿಗೆ ಮುಂದಾಗಿದ್ದಾರೆ.

ಹಿಂದಿನ ಲೇಖನಸ್ಮೃತಿ ಮಂಧಾನಗೆ 2021ರ ಐಸಿಸಿ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿ
ಮುಂದಿನ ಲೇಖನಭೀಕರ ರಸ್ತೆ ಅಪಘಾತ: ಶಾಸಕರ ಪುತ್ರ ಸೇರಿ 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ಸಾವು