ಮನೆ ಸ್ಥಳೀಯ ಬಸ್ ​ನಲ್ಲಿ ಪುರುಷ ಪ್ರಯಾಣಿಕರಿಗೆ ಸೀಟು ಬಿಟ್ಟುಕೊಡಿ: ಕೆಎಸ್​ ಆರ್ ​ಟಿಸಿ ಮೈಸೂರು ವಿಭಾಗದಿಂದ ಆದೇಶ

ಬಸ್ ​ನಲ್ಲಿ ಪುರುಷ ಪ್ರಯಾಣಿಕರಿಗೆ ಸೀಟು ಬಿಟ್ಟುಕೊಡಿ: ಕೆಎಸ್​ ಆರ್ ​ಟಿಸಿ ಮೈಸೂರು ವಿಭಾಗದಿಂದ ಆದೇಶ

0

ಮೈಸೂರು: ಮಹಿಳಾ ಪ್ರಯಾಣಿಕರೇ ಹೆಚ್ಚು ಇರುವ ಕಾರಣ ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಅವರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ ಹರಿಸಬೇಕು ಎಂದು ಕೆಎಸ್ಆರ್​ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಇತ್ತೀಚೆಗೆ ಆದೇಶ ಹೊರಡಿಸಿರುವುದು ಬೆಳಕಿಗೆ ಬಂದಿದೆ.

Join Our Whatsapp Group

ಕೆಎಸ್‌ಆರ್‌ಟಿಸಿ ಆದೇಶದಲ್ಲಿ ಏನಿದೆ?

ಪುರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳೆಯರು ಕುಳಿತು ಪ್ರಯಾಣಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗುತ್ತಿದೆ. ಮೈಸೂರು ನಗರ ಸಾರಿಗೆ ವಾಹನಗಳಲ್ಲಿನ ಮರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳಾ ಪ್ರಯಾಣಿಕರು ಕುಳಿತುಕೊಳ್ಳುತ್ತಿದ್ದು, ಪುರುಷ ಪ್ರಯಾಣಿಕರಿಗೆ ಆಸನಗಳು ಸಿಗುವುದಿಲ್ಲವೆಂದು ಶ್ರೀ ವಿಷ್ಣುವರ್ಧನ.ಎಸ್ ಎಂಬವರು ಕೇಂದ್ರ ಕಚೇರಿಗೆ ಉಲ್ಲೇಖದಂತೆ ದೂರು ಸಲ್ಲಿಸಿರುವುದು ಸರಿಯಷ್ಟೆ. ಅದರಂತೆ ತಮ್ಮ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲಾ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ ಹಾಗೂ ತೆಗೆದುಕೊಂಡ ಕ್ರಮದ ಉರಿತು ಅನುಸರಣಾ ವರದಿ ಕಳುಹಿಸಬೇಕು ಎಂದು ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿರುವುದು ಅಂಕಿ ಅಂಶಗಳಿಂದ ತಿಳಿಬಂದಿದೆ. ಹೀಗಾಗಿ ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಹಲವೆಡೆ ಈ ಹಿಂದೆಯೂ ಕೇಳಿ ಬಂದಿದ್ದವು. ಆದರೆ ಈ ವಿಚಾರದಲ್ಲಿ ಕೆಎಸ್ಆರ್ಟಿಸಿ ಆದೇಶ ಹೊರಡಿಸುವಂತಾಗಿರುವುದು ಇದೇ ಮೊದಲಾಗಿದೆ.