ನಿವೃತ್ತ ಜಿಲ್ಲಾ ನ್ಯಾಯಾಧೀಶರಿಗೆ ಸಾಕಷ್ಟು ಪಿಂಚಣಿ ನೀಡಲಾಗುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಬೇಸರ ವ್ಯಕ್ತಪಡಿಸಿದೆ.
ನ್ಯಾಯಾಧೀಶರ ಪಿಂಚಣಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ , ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠ ಭಾರತದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರಿಗೆ ನ್ಯಾಯಾಲಯಕ್ಕೆ ನೆರವಾಗಲು ಸೂಚಿಸಿತು.
“ಇದು ಬಹಳ ಗಂಭೀರವಾದ ವಿಷಯ, ಅಟಾರ್ನಿ ಜನರಲ್ ಅವರೇ. ಇಷ್ಟು ದೀರ್ಘ ಸೇವೆಯ ನಂತರ ನಿವೃತ್ತ ಜಿಲ್ಲಾ ನ್ಯಾಯಾಧೀಶರಿಗೆ ₹19,000 ರಿಂದ 20,000 ವೇತನ ನೀಡುವುದು ಸರಿಯಲ್ಲ. ಆಗ ಅವರು ಖಾಸಗಿ ಪ್ರಾಕ್ಟೀಸ್ಗೆ ಮುಂದಾಗಲು ಸಾಧ್ಯವೇ? ನೀವೇ ಊಹಿಸಿ. ಅವರು ನಿಜವಾಗಿಯೂ ಅಸಹಾಯಕವಾಗಿಬಿಡುತ್ತಾರೆ” ಎಂದು ಸಿಜೆಐ ಚಂದ್ರಚೂಡ್ ಹೇಳಿದರು.
ಕೆಲ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಪಿಂಚಣಿ ನೀಡಲಾಗುತ್ತಿಲ್ಲ. ಈ ಬಗ್ಗೆಯೂ ಗಮನಹರಿಸಿ ಎಂದು ಸಿಜೆಐ ಹೇಳಿದರು.
ಆಗ ಎಜಿ ಅವರು “ಪರಿಶೀಲಿಸುವೆ. ಆದರೆ ಪಿಂಚಣಿ ಸಿಗದೆ ಇರುವುದು ಕೆಲವೇ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಇರಬೇಕು. ಎಲ್ಲರಿಗೂ ಅಲ್ಲ” ಎಂದು ಎಜಿ ಉತ್ತರಿಸಿದರು.
ಇದೇ ಪ್ರಕರಣದ ಹಿಂದಿನ ವಿಚಾರಣೆಯ ಸಮಯದಲ್ಲಿ, ನ್ಯಾಯಾಧೀಶರು ತಮ್ಮ ಕೆಲಸದ ಜೀವನದ ಗಮನಾರ್ಹ ಭಾಗವನ್ನು ನ್ಯಾಯಾಂಗ ಸಂಸ್ಥೆಯ ಸೇವೆಯಲ್ಲಿ ಕಳೆಯುವುದರಿಂದ ನಿವೃತ್ತಿಯ ನಂತರ ಘನತೆಯ ಜೀವನವನ್ನು ನಡೆಸಲು ಅನುವು ಮಾಡಿಕೊಡುವ ಮಹತ್ವವನ್ನು ನ್ಯಾಯಪೀಠ ಒತ್ತಿಹೇಳಿತ್ತು.
“ನ್ಯಾಯಾಂಗ ಅಧಿಕಾರಿಗಳು ತಮ್ಮ ಜೀವನದ ಬಹುಭಾಗವನ್ನು ನ್ಯಾಯಾಂಗ ಸಂಸ್ಥೆಯ ಸೇವೆಯಲ್ಲಿ ಕಳೆದರೂ ವಕೀಲ ಸಮುದಾಯದ ಉಳಿದ ಸದಸ್ಯರಿಗೆ ಲಭ್ಯವಿರುವ ಪ್ರಯೋಜನಗಳನ್ನು ತೆಗೆದುಕೊಳ್ಳುವುದಿಲ್ಲ. ಆದ್ದರಿಂದ ನಿವೃತ್ತಿಯ ನಂತರ ನ್ಯಾಯಾಂಗ ಅಧಿಕಾರಿಗಳು ಘನತೆಯಿಂದ ಬದುಕುವಂತೆ ಪ್ರಭುತ್ವ ನೋಡಿಕೊಳ್ಳಬೇಕು” ಎಂದು ಸಿಜೆಐ ಹೇಳಿದರು.
ಜುಲೈ 1ರಿಂದ ಜಿಲ್ಲಾ ನ್ಯಾಯಾಧೀಶರಿಗೆ ಪರಿಷ್ಕೃತ ದರದಲ್ಲಿ ಪಿಂಚಣಿ ಪಾವತಿಸುವ ತನ್ನ ಹಿಂದಿನ ನಿರ್ದೇಶನಗಳನ್ನು ಪಾಲಿಸದ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯವು ನವೆಂಬರ್ನಲ್ಲಿ ಎಚ್ಚರಿಕೆ ನೀಡಿತ್ತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.