ಮನೆ ರಾಷ್ಟ್ರೀಯ ಜಾಗತಿಕ  ಬಂಡವಾಳ ಹೂಡಿಕೆದಾರರ ಸಮಾವೇಶ : ವರ್ಚುಯಲ್ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ

ಜಾಗತಿಕ  ಬಂಡವಾಳ ಹೂಡಿಕೆದಾರರ ಸಮಾವೇಶ : ವರ್ಚುಯಲ್ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ

0

ಬೆಂಗಳೂರು(Bengaluru): ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ವರ್ಚುಯಲ್ ಮೂಲಕ ಉದ್ಘಾಟಿಸಿದರು.

ಬಿಲ್ಡ್ ಫಾರ್ ದಿ ವರ್ಲ್ಡ್ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಸಮಾವೇಶ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,  ಕೋವಿಡ್ ಬಳಿಕ ಕರ್ನಾಟಕ ಮೊದಲ ರಾಜ್ಯದ ದೊಡ್ಡಮಟ್ಟದಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯುತ್ತಿದೆ. ಕರ್ನಾಟಕದ ಜನರ ಶಕ್ತಿ ಹಾಗೂ ಆರ್ಥಿಕ ಬೆಳವಣಿಗೆಯ ಬಗ್ಗೆ ಇರುವ ಆತ್ಮವಿಶ್ವಾಸ ಇಷ್ಟು ದೊಡ್ಡ ಸಮಾವೇಶ ಹಮ್ಮಿಕೊಳ್ಳಲು ಸಾಧ್ಯವಾಗಿದೆ ಎಂದರು.

ಮೂರು ದಿನಗಳ ಕಾಲ ನಡೆಯಲಿರುವ ( ನವೆಂಬರ್ 2 ರಿಂದ 4) ಈ ಸಮಾವೇಶದಲ್ಲಿ ದೇಶ ವಿದೇಶದ ಪ್ರಮುಖ ಉದ್ಯಮಿಗಳು ಭಾಗಿಯಾಗಲಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶದಿಂದಾಗಿ ರಾಜ್ಯಕ್ಕೆ ಈ ಬಾರಿ 5 ಲಕ್ಷ ಕೋಟಿ ಹೂಡಿಕೆ ಹರಿದು ಬರುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ವಿಶ್ವದ ಹಲವು ರಾಷ್ಟ್ರಗಳ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ದೇಶ ವಿದೇಶಗಳ ಉದ್ಯಮ ಕ್ಷೇತ್ರದ ದಿಗ್ಗಜರು ಭಾಗಿಯಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಪೀಯೂಷ್ ಗೋಯಲ್, ಸ್ಮೃತಿ ಇರಾನಿ, ಸಿಎಂ ಬಸವರಾಜ ಬೊಮ್ಮಾಯಿ, ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಭಾಗಿಯಾಗಲಿದ್ದಾರೆ.

ಜೆಎಸ್ ಡ್ಬ್ಯೂ ಅಧ್ಯಕ್ಷ ಸಜ್ಜನ್ ಜಿಂದಾಲ್, ಸ್ಟೆರ್ಲೈಟ್ ಪವರ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಪ್ರತೀಕ್ ಅಗರ್ ವಾಲ್, ಅದಾನಿ ಪೋರ್ಟ್ ಮತ್ತು ಎಸ್ ಇ ಝೆಡ್ ನ ಕರಣ್ ಗೌತಮ್ ಅದಾನಿ, ಆದಿತ್ಯ ಬಿರ್ಲಾ ಗ್ರೂಪ್ ಅಧ್ಯಕ್ಷ ಕೆ.ಎಂ ಬಿರ್ಲಾ ಸೇರಿದಂತೆ ಪ್ರಮುಖ ಉದ್ಯಮಿಗಳು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.