ಮನೆ ಕಾನೂನು ದುಬೈಯಿಂದ 3.44 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ: ಅಂಧ ವ್ಯಕ್ತಿ ಅರೆಸ್ಟ್

ದುಬೈಯಿಂದ 3.44 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ: ಅಂಧ ವ್ಯಕ್ತಿ ಅರೆಸ್ಟ್

0

ಬೆಂಗಳೂರು: ದುಬೈನಿಂದ 3.44 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂಧ ವ್ಯಕ್ತಿಯೊಬ್ಬರನ್ನು ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

Join Our Whatsapp Group

ಶಂಕಿತನ ಗುರುತನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. ಗುಪ್ತಚರ ಇಲಾಖೆಯಿಂದ ದೊರೆತ ಖಚಿತ ಮಾಹಿತಿ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮಾರ್ಚ್ 4 ರಂದು ಸ್ಮಗ್ಲಿಂಗ್ ಪ್ರಕರಣ ಬಯಲಿಗೆಳೆದಿದ್ದಾರೆ.

ದುಬೈನಿಂದ ಆಗಮಿಸಿದ ಅಂಧ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಡೆದಿದ್ದಾರೆ. ಶೋಧದ ಸಮಯದಲ್ಲಿ ಅಧಿಕಾರಿಗಳಿಗೆ, ಅಂಧ ವ್ಯಕ್ತಿಯ ಶರ್ಟ್ ಒಳಗೆ ಅಡಗಿಸಿಟ್ಟಿದ್ದ 3.995 ಕೆಜಿ ಚಿನ್ನ ಪತ್ತೆಯಾಗಿದೆ.

3,44,38,796 ರೂ. ಮೌಲ್ಯದ ಚಿನ್ನವನ್ನು ಶಂಕಿತನ ಅಂಗಿಯ ಒಳಗಡೆ ಮರೆಮಾಡಲಾಗಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಿನ್ನ ಕಳ್ಳಸಾಗಣೆ ಸಂಬಂಧಿತ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅಂಧ ವ್ಯಕ್ತಿಯು ಒಬ್ಬನೇ ಈ ಕೃತ್ಯ ಎಸಗಿದ್ದಾನೆಯೇ ಅಥವಾ ಆತನ ಹಿಂದೆ ಬೇರೆಯವರ ಕೈವಾಡ ಇದೆಯೇ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.