ಬೆಂಗಳೂರು: ರಾಜ್ಯದ ಸಾವಿರಾರು ವೈದ್ಯಕೀಯ ಕೋರ್ಸ್‌ಗಳಿಗೆ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ದೊಡ್ಡ ಸಿಹಿಸುದ್ದಿ ಸಿಕ್ಕಿದೆ. ಇದರಿಂದ ವೈದ್ಯಕೀಯ ಶಿಕ್ಷಣದ ಆಸೆಪಡುವ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಅತೀವ ಸಹಾಯವಾಗಲಿದೆ.
ಮೇ 16ರಂದು ನಡೆದ ಮಹತ್ವದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಈ ನಿರ್ಧಾರ ಪ್ರಕಟಿಸಿದರು. ಈ ಸಭೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳು ಈ ಬಾರಿ ಶೇಕಡಾ 15ರಷ್ಟು ಶುಲ್ಕ ಹೆಚ್ಚಳ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ ಸರ್ಕಾರ ಈ ಪ್ರಸ್ತಾವನೆ ತಿರಸ್ಕರಿಸಿದೆ.
“ಯಾವುದೇ ಕಾರಣಕ್ಕೂ ಈ ಶೈಕ್ಷಣಿಕ ವರ್ಷಕ್ಕೆ ಶುಲ್ಕ ಏರಿಕೆ ಮಾಡಲಾಗದು” ಎಂದು ಸಚಿವರು ಖಾಸಗಿ ಕಾಲೇಜುಗಳ ಪ್ರತಿನಿಧಿಗಳಿಗೆ ಸ್ಪಷ್ಟವಾಗಿ ತಿಳಿಸಿದರು. “ಹೆಚ್ಚುವರಿ ಹಣದ ಭಾರವನ್ನು ವಿದ್ಯಾರ್ಥಿಗಳು ಹಾಗೂ ಪಾಲಕರು ಭರಿಸಲು ಸಾಧ್ಯವಿಲ್ಲ. ಕಳೆದ ವರ್ಷ ನಾವು ಕೆಲವೊಂದು ಮಟ್ಟದ ಶುಲ್ಕ ಏರಿಕೆಗೆ ಅನುಮತಿ ನೀಡಿದ್ದೆವು. ಆದರೆ ಈ ವರ್ಷ ಅಂಥದು ಸಾಧ್ಯವಿಲ್ಲ” ಎಂದಿದ್ದಾರೆ.















