ಮನೆ ರಾಜ್ಯ ಪಿಯು ವಿದ್ಯಾರ್ಥಿನಿಯರಿಗೆ  ಗುಡ್ ನ್ಯೂಸ್: ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ ನೀಡಿದ ಸರ್ಕಾರ

ಪಿಯು ವಿದ್ಯಾರ್ಥಿನಿಯರಿಗೆ  ಗುಡ್ ನ್ಯೂಸ್: ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ ನೀಡಿದ ಸರ್ಕಾರ

0

ಬೆಂಗಳೂರು(Bengaluru): ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಓದುವ ವಿದ್ಯಾರ್ಥಿನಿಯರಿಗೆ ಕಾಲೇಜು ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ರಾಜ್ಯದ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿನಿಯರಿಗೆ 2019-20ನೇ ಸಾಲಿನಿಂದ 456 ರೂಪಾಯಿ ಶುಲ್ಕದಿಂದ ವಿನಾಯಿತಿ ನೀಡಿ, ಪ್ರವೇಶ ನೀಡಲು ಆದೇಶಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ಕೇವಲ ಆಯಾ ವರ್ಷಗಳಿಗೆ ಮಾತ್ರ ಸೀಮಿತವಾಗಿ ಶುಲ್ಕದಿಂದ ವಿನಾಯಿತಿ ನೀಡಿ, ಪ್ರಾಂಶುಪಾಲರ ಖಾತೆಗೆಜಮೆ ಮಾಡಲು ಅನುಮತಿ ನೀಡಲಾಗುತ್ತಿತ್ತು.

ಆದರೆ ಸಧ್ಯ 2022-23ನೇ ಶೈಕ್ಷಣಿಕ ಸಾಲಿನಿಂದ ಶಾಶ್ವತವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ 456 ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಈ ಮೂಲಕ ಇನ್ಮುಂದೆ ಸರ್ಕಾರವೇ ಶುಲ್ಕ ಪಾವತಿ ಮಾಡಲಿದೆ. ಕಾಲೇಜಿನ ಪ್ರಾಂಶುಪಾಲರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುತ್ತದೆ. ಇದರಿಂದಾಗಿ ಬಡತನದಲ್ಲಿಯೂ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲಿದೆ.

ಹಿಂದಿನ ಲೇಖನಮಂಗಳೂರು: ಅರ್ಧ ಗಂಟೆಯಲ್ಲಿ 6 ಸೆಂ.ಮೀ.ಮಳೆ
ಮುಂದಿನ ಲೇಖನಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ