ಮನೆ ಸುದ್ದಿ ಜಾಲ ಬಿಸಿಸಿಐಯಿಂದ ರೋಹಿತ್ ಶರ್ಮಾ, ಕೊಹ್ಲಿಅಭಿಮಾನಿಗಳಿಗೆ ಸಿಹಿ ಸುದ್ದಿ

ಬಿಸಿಸಿಐಯಿಂದ ರೋಹಿತ್ ಶರ್ಮಾ, ಕೊಹ್ಲಿಅಭಿಮಾನಿಗಳಿಗೆ ಸಿಹಿ ಸುದ್ದಿ

0

ಇಂಡಿಯಾ ಟೀಂನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇದ್ರೆ ಅದ್ರ ಮಜವೇ ಬೇರೆ. ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅಭಿಮಾನಿಗಳ ಸಂಖ್ಯೆ ಕೋಟಿಯಲ್ಲಿದೆ. ಈ ಇಬ್ಬರು ಆಟಗಾರರ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡ ಬಿಸಿಸಿಐ ಮಹತ್ವದ ಹೆಜ್ಜೆ ಇಟ್ಟಿದೆ. ಇಬ್ಬರೂ ಆಟಗಾರರು ಈ ವರ್ಷ ಹಿಂದಿಗಿಂತ ಹೆಚ್ಚು ಪಂದ್ಯಗಳನ್ನು ಆಡಲಿದ್ದಾರೆ. ಟೀಮ್ ಇಂಡಿಯಾ ಈ ವರ್ಷದ ಅಕ್ಟೋಬರ್ನಲ್ಲಿ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಮೊದಲು, ಟೀಂ ಇಂಡಿಯಾ ಮೂರು ಏಕದಿನ ಪಂದ್ಯಗಳನ್ನಾಡುವ ನಿರ್ಧಾರ ಮಾಡಿತ್ತು. ಆದ್ರೀಗ ಅದ್ರ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಈ ಪ್ರವಾಸಕ್ಕಾಗಿ ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಭಾರತೀಯ ತಂಡವು ಅಕ್ಟೋಬರ್ 22 ರಿಂದ ತನ್ನ ಪ್ರವಾಸವನ್ನು ಪ್ರಾರಂಭಿಸಲಿದ್ದು, ಈ ಪ್ರವಾಸವು ಐದು ಟಿ 20 , ಐದು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಒಳಗೊಂಡಿರುತ್ತದೆ ಎನ್ನಲಾಗಿದೆ.

2026 ರಲ್ಲಿ, ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಸರಣಿ ಆಡಿತ್ತು. ಇದರಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೂರು ಪಂದ್ಯಗಳನ್ನು ಆಡಿದ್ದರು. ಐಪಿಎಲ್ ಮುಗಿದಿದ್ದು ಈಗ ಆರಂಭದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿ, ಶರ್ಮಾ ಆಡಲಿದ್ದಾರೆ. ಮೂರು ಏಕದಿನ ಪಂದ್ಯಗಳಲ್ಲಿ ಕೊಹ್ಲಿ- ಶರ್ಮಾ ಮೈದಾನಕ್ಕೆ ಇಳಿಯಲಿದ್ದಾರೆ. ನಂತರ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಮತ್ತೆ ಮೂರು ಏಕದಿನ ಪಂದ್ಯ ನಡೆಯಲಿದೆ. ಅಲ್ಲಿಯೂ ಕೊಹ್ಲಿ ಮತ್ತು ಶರ್ಮಾ ಮೈದಾನಕ್ಕಿಳಿಯಲಿದ್ದಾರೆ. ಈ ಪ್ರವಾಸದ ನಂತ್ರ ಭಾರತ ಮತ್ತು ಶ್ರೀಲಂಕಾ ನಡುವೆ ಮೂರು ಏಕದಿನ ಪಂದ್ಯ ನಡೆಯಲಿದೆ.

ಇದರ ನಂತರ, ಟೀಮ್ ಇಂಡಿಯಾ ಬಾಂಗ್ಲಾದೇಶ ವಿರುದ್ಧ ಮೂರು ಏಕದಿನ ಪಂದ್ಯಗಳನ್ನು ಆಡುವ ಸಾಧ್ಯತೆ ಇದೆ. ವರ್ಷದ ನಂತರ, ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ಮತ್ತು ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಎಂಟು ಏಕದಿನ ಪಂದ್ಯಗಳು ನಡೆಯಲಿವೆ. ಒಟ್ಟಾರೆಯಾಗಿ, ಈ ಇಬ್ಬರು ಅನುಭವಿಗಳು ಈ ವರ್ಷ ಟೀಮ್ ಇಂಡಿಯಾ ಪರ 20 ಏಕದಿನ ಪಂದ್ಯಗಳನ್ನು ಆಡುವ ಸಾಧ್ಯತೆ ಇದೆ. ಟಿ 20 ಹಾಗೂ ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿ ಮತ್ತು ಶರ್ಮಾ ಅವರನ್ನು ಮಿಸ್ ಮಾಡಿಕೊಳ್ತಿರುವ ಅಭಿಮಾನಿಗಳು ಈ ಬಾರಿ ಸ್ವಲ್ಪ ಖುಷಿಯಾಗಿದ್ದಾರೆ. ಏಕದಿನ ಪಂದ್ಯಗಳಲ್ಲಾದ್ರೂ ಇಬ್ಬರು ದಿಗ್ಗಜ ಆಟಗಾರರನ್ನು ಹೆಚ್ಚು ನೋಡುವ ಅವಕಾಶ ಸಿಕ್ತಿರೋದಕ್ಕೆ ಸಮಾಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ.