ಮನೆ ರಾಜ್ಯ ಬೀದರ್ ಬಂದ್‌ ಗೆ ಉತ್ತಮ ಪ್ರತಿಕ್ರಿಯೆ: ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

ಬೀದರ್ ಬಂದ್‌ ಗೆ ಉತ್ತಮ ಪ್ರತಿಕ್ರಿಯೆ: ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

0

ಬೀದರ್: ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಸ್ವಾಭಿಮಾನಿ ಡಾ. ಬಿ.ಆರ್ ಅಂಬೇಡ್ಕರ್ ಹೋರಾಟ ಸಮಿತಿ ಗುರುವಾರ ಕರೆ ನೀಡಿರುವ ಬೀದರ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Join Our Whatsapp Group

ಬಂದ್ ಹಿನ್ನಲೆ ನಗರದ ಅಂಗಡಿ-ಮುಗ್ಗಟ್ಟುಗಳು ಸಂಪೂರ್ಣ ಬಂದ್ ಆಗಿದ್ದು, ಸಾರಿಗೆ ಸಂಚಾರ ಸ್ಥಗಿತಗೊಂಡಿದೆ. ನಗರ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿ ಶಾಲಾ- ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಆಟೋ ಸೇರಿದಂತೆ ಯಾವುದೇ ವಾಹನಗಳು ರಸ್ತೆಗಿಳಿದಿಲ್ಲ. ಆಸ್ಪತ್ರೆ, ಔಷಧಿ ಮಳಿಗೆಗಳು ಮಾತ್ರ ಎಂದಿನಂತೆ ತೆರೆದಿವೆ. ಹಾಗಾಗಿ ನಗರದ ರಸ್ತೆಗಳು ಬಿಕೋ ಎನ್ನುತ್ತಿವೆ.

ಸಮಿತಿಯ ಹೋರಾಟಕ್ಕೆ ಬಿಎಸ್‌ಪಿ, ಆರ್‌ಪಿಐ ಪಕ್ಷ ಸೇರಿದಂತೆ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಮುಖಂಡರು ಮತ್ತು ಕಾರ್ಯಕರ್ತರು ಕೈಯಲ್ಲಿ ನೀಲಿ ಧಜ ಹಿಡಿದುಕೊಂಡು ಜಯ ಘೋಷಣೆಗಳೊಂದಿಗೆ ನಗರದಲ್ಲಿ ಬೈಕ್ ಹಾಗೂ ಕಾರುಗಳಲ್ಲಿ ಸುತ್ತಾಡುತ್ತಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ ಸೇರಿ ಪ್ರಮುಖ ವೃತ್ತ, ರಸ್ತೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.