Saval TV on YouTube
ಮಂಡ್ಯ(Mandya): ಕಬ್ಬು, ಇತರ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ಸೋಮವಾರ ರೈತಸಂಘದ ಸದಸ್ಯರು ಕರೆ ನೀಡಿರುವ ಮಂಡ್ಯ ಬಂದ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳ್ಳಂಬೆಳಿಗ್ಗೆ ರಸ್ತಗಿಳಿದ ರೈತರು ಕೆಲಕಾಲ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದರು. ನಗರದ ವಿವಿಧೆಡೆ ಬೈಕ್ ರ್ಯಾಲಿ ನಡೆಸಿ ಅಂಗಡಿ ಮುಂಗಟ್ಟು ಮುಚ್ಚಿಸಿದರು.
ಕೆಲ ವರ್ತಕರು ಸ್ವಯಂಪ್ರೇರಿತವಾಗಿ ಅಂಗಡಿ ಮುಚ್ಚಿದ್ದರು. ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ.
ವಿವಿಧ ಬೇಡಿಕೆ ಈಡೇರಿಕೆಗೆ ನಗರದ ಸರ್ ಎಂ.ವಿ ಪ್ರತಿಮೆ ಎದುರು ರೈತಸಂಘ ತಿಂಗಳಿಂದ ಅನಿರ್ದಿಷ್ಟವಧಿ ಧರಣಿ ನಡೆಸುತ್ತಿದೆ. ನಿರಂತರ ಹೋರಾಟಕ್ಕೆ ಸರ್ಕಾರ ಸ್ಪಂದನೆ ನೀಡದ ಕಾರಣ ನಡೆಸಲಾಗುತ್ತಿದೆ.