ಮನೆ ರಾಷ್ಟ್ರೀಯ ಹಳಿ ತಪ್ಪಿದ ಗೂಡ್ಸ್ ರೈಲು: ಇಬ್ಬರ ಸಾವು

ಹಳಿ ತಪ್ಪಿದ ಗೂಡ್ಸ್ ರೈಲು: ಇಬ್ಬರ ಸಾವು

0

ಒಡಿಶಾ: ಜಾಜ್‌’ಪುರ ಜಿಲ್ಲೆಯ ಕೋರಯಿ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿ ಉರುಳಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಘಟನೆಯಲ್ಲಿ ಕೆಲವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಬೆಳಿಗ್ಗೆ ಸುಮಾರು 6.45ಕ್ಕೆ ಯಾತ್ರಿಕರು ಪ್ರಯಾಣಿಕ ರೈಲಿಗಾಗಿ ಪ್ಲಾಟ್‌’ಫಾರ್ಮ್‌’ನಲ್ಲಿ ಕಾಯುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಪೂರ್ವ ಕರಾವಳಿ ರೈಲ್ವೆ (ಇಸಿಒಆರ್) ಅಧಿಕಾರಿಗಳು ತಿಳಿಸಿದ್ದಾರೆ.

ಡೊಂಗೊಪೋಸಿಯಿಂದ ಛತ್ರಪುರಕ್ಕೆ ಚಲಿಸುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿ ಪ್ಲಾಟ್‌ಫಾರ್ಮ್‌ಗೆ ಉರುಳಿ ಬಿದ್ದಿದೆ. ಅವಘಡದ ಹಿಂದಿನ ಕಾರಣ ತಿಳಿದು ಬಂದಿಲ್ಲ.

ಅಪಘಾತ ನಡೆದ ಸ್ಥಳಕ್ಕೆ ವೈದ್ಯಕೀಯ ತಂಡವನ್ನು ರವಾನಿಸಲಾಗಿದೆ. ಅಪಘಾತಕ್ಕೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ಸೂಚಿಸಿದ್ದಾರೆ.

ಹಿಂದಿನ ಲೇಖನಮೃತ ಉದ್ಯೋಗಿಯ ಎರಡನೇ ಪತ್ನಿಯಿಂದ ಜನಿಸಿದ ಮಗು ಅನುಕಂಪದ ನೇಮಕಾತಿಗೆ ಅರ್ಹ: ರಾಜಸ್ಥಾನ ಹೈಕೋರ್ಟ್
ಮುಂದಿನ ಲೇಖನಚಿಕ್ಕಮಗಳೂರು: ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ