ಬೆಂಗಳೂರು: ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ನನಗೂ ಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದಾರೆ. ಇದಕ್ಕಾಗಿ ಎಐಸಿಸಿ ನಾಯಕರಿಗೆ ಧನ್ಯವಾದ ತಿಳಿಸುತ್ತೇನೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ಗೆ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಮ್ಮಿಂದ ರಾಜ್ಯದ ಜನರು ಸಾಕಷ್ಟು ನಿರೀಕ್ಷೆ ಮಾಡಿದ್ದಾರೆ. ಈ ಜವಾಬ್ದಾರಿ ನಮ್ಮೆಲ್ಲರಿಗೂ ಕೂಡ ಅತಿದೊಡ್ಡ ಸವಾಲು. ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವುದಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತೇವೆ. ಮೊದಲ ಕ್ಯಾಬಿನೆಟ್ನಲ್ಲಿ 5 ಗ್ಯಾರೆಂಟಿ ಯೋಜನೆಗಳನ್ನು ಅನುಮೋದನೆ ಆಗಬೇಕಿದೆ ಎಂದು ಹೇಳಿದರು.
ಸಣ್ಣಪುಟ್ಟ ವ್ಯತ್ಯಾಸಗಳನ್ನು ಬಿಟ್ಡು ಕೆಲಸ ಮಾಡಿದರೆ, ಯಾವುದೇ ಗೊಂದಲವಿಲ್ಲದೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಈಗ ಯಾವುದೇ ಗೊಂದಲ ಇಲ್ಲ. ಹಾಗೆಯೇ ನನಗೆ ಯಾವುದೇ ಅಸಮಾಧಾನ ಇಲ್ಲ. ಎಲ್ಲವನ್ನು ಸಂತೋಷದಿಂದಲೇ ಸ್ವೀಕಾರ ಮಾಡುತ್ತೇನೆ. ಗ್ಯಾರಂಟಿ ಯೋಜನೆ ಜಾರಿಗೆ ಅನುಷ್ಟಾನ ಸಂದರ್ಭದಲ್ಲಿ ಕೆಲವು ನಿಯಮ ಮಾಡಬೇಕಾಗುತ್ತದೆ ಎಂದು ಹೇಳಿದರು.