ಮನೆ ರಾಷ್ಟ್ರೀಯ ಸರ್ಕಾರಿ ಬಸ್ -ಕಾರು ಮುಖಾಮುಖಿ ಡಿಕ್ಕಿ: 6 ಮಂದಿ ಸಾವು

ಸರ್ಕಾರಿ ಬಸ್ -ಕಾರು ಮುಖಾಮುಖಿ ಡಿಕ್ಕಿ: 6 ಮಂದಿ ಸಾವು

0

ತಮಿಳುನಾಡು: ಸರ್ಕಾರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ 6 ಮಂದಿ ಮೃತಪಟ್ಟಿರುವ ಘಟನೆ ಸೋಮವಾರ ತಡರಾತ್ರಿ ತಮಿಳುನಾಡಿನ ತಿರುವಣ್ಣಾಮಲೈನ ಅಂಧನೂರ್ ಬೈಪಾಸ್ ಬಳಿ ನಡೆದಿದೆ.

10 ಜನರಿದ್ದ ಟಾಟಾ ಸುಮೋ ತಿರುವಣ್ಣಾಮಲೈನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಸೆಂಗಂ ಬಳಿ ಸರ್ಕಾರಿ ಬಸ್‌ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ನಾಲ್ವರನ್ನು ಚೇತರಿಸಿಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಸ್ಸಿನಲ್ಲಿದ್ದ ಸುಮಾರು 10 ಪ್ರಯಾಣಿಕರಿಗೂ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ಸೆಂಗಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಕುರಿತು ಸೆಂಗಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ಮುಂದುವರೆದಿದೆ. ಸಂಗಮ-ಕೃಷ್ಣಗಿರಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ತನಿಖೆ ನಡೆಸಿದ್ದಾರೆ.

ಹಿಂದಿನ ಲೇಖನನಾಡಹಬ್ಬ ದಸರಾಗೆ ಕ್ಷಣಗಣನೆ:  ಅಂಬಾರಿ ಸಾಗುವ ಮಾರ್ಗದಲ್ಲಿ ಬಿಗಿ ಪೊಲೀಸ್ ಭದ್ರತೆ
ಮುಂದಿನ ಲೇಖನಕುಣಿಯಲು ಬಿಟ್ಟು ನೆಲ ಅಗೆಯುವ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ?: ಸಿಎಂ ಸಿದ್ದರಾಮಯ್ಯಗೆ ಹೆಚ್’ಡಿಕೆ ತಿರುಗೇಟು