ಮನೆ ಅಪರಾಧ ಮಹಿಳೆಗೆ ಸರಕಾರಿ ಬಸ್ ಡಿಕ್ಕಿ: ಮಹಿಳೆಗೆ ಗಂಭೀರ ಗಾಯ

ಮಹಿಳೆಗೆ ಸರಕಾರಿ ಬಸ್ ಡಿಕ್ಕಿ: ಮಹಿಳೆಗೆ ಗಂಭೀರ ಗಾಯ

0

ಭದ್ರಾವತಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಸರಕಾರಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯ ಕಾಲಿಗೆ ಗಂಭೀರ ಗಾಯವಾದ ಘಟನೆ ಭದ್ರಾವತಿ ಬಸ್ ನಿಲ್ದಾಣದ ಬಳಿ ಮಂಗಳವಾರ ಸಂಜೆ ಸಂಭವಿಸಿದೆ.

ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಮಹಿಳೆ ರಸ್ತೆ ದಾಟುತ್ತಿರುವ ವೇಳೆ ಬಸ್ ನಿಲ್ದಾಣಕ್ಕೆ ತಿರುವು ಪಡೆದ ಚಾಲಕ ಎದುರಿಗೆ ಹೋಗುತ್ತಿದ್ದ ಮಹಿಳೆಯನ್ನು ಗಮನಿಸದೆ ಡಿಕ್ಕಿ ಹೊಡೆದಿದ್ದಾನೆ. ಬಸ್ಸು ಡಿಕ್ಕಿ ಹೊಡೆದ ರಭಸಕ್ಕೆ ನೆಲಕ್ಕೆ ಬಿದ್ದ ಮಹಿಳೆಯ ಕಾಲಿನ ಮೇಲೆ ಬಸ್ಸಿನ ಚಕ್ರ ಹರಿದಿದೆ ಪರಿಣಾಮ ಮಹಿಳೆಯ ಕಾಲಿಗೆ ಗಂಭೀರ ಗಾಯವಾಗಿದೆ.

ಗಾಯಗೊಂಡ ಮಹಿಳೆಯನ್ನು ಭದ್ರಾವತಿ ಪಟ್ಟಣದ ನಿವಾಸಿಯಾದ ಚಂದ್ರಾಬಾಯಿ ಎನ್ನಲಾಗಿದೆ.

ಮಹಿಳೆ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದೆ, ಭದ್ರಾವತಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಿಂದಿನ ಲೇಖನಶರಣರನ್ನು ಹೊರಗಿಟ್ಟು 3 ದಿನದಲ್ಲಿ ಮಠ, ಎಸ್‌ ಜೆಎಂ ವಿದ್ಯಾಪೀಠ ನಿರ್ವಹಣೆಗೆ ಸಮಿತಿ ರಚಿಸಲು ಸರ್ಕಾರಕ್ಕೆ ಸುಪ್ರೀಂ ಆದೇಶ
ಮುಂದಿನ ಲೇಖನದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯಿಂದ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ