ಮನೆ ರಾಜಕೀಯ ಶಾಲಾ ಕಾಲೇಜುಗಳಲ್ಲಿ ಸಹಜ,  ಶಾಂತಿ  ವಾತಾವರಣ ಕಾಪಾಡಲು ಸರ್ಕಾರ ಬದ್ಧ: ಗೃಹ ಸಚಿವ ಆರಗ ಜ್ಞಾನೇಂದ್ರ.

ಶಾಲಾ ಕಾಲೇಜುಗಳಲ್ಲಿ ಸಹಜ,  ಶಾಂತಿ  ವಾತಾವರಣ ಕಾಪಾಡಲು ಸರ್ಕಾರ ಬದ್ಧ: ಗೃಹ ಸಚಿವ ಆರಗ ಜ್ಞಾನೇಂದ್ರ.

0

ಬೆಂಗಳೂರು:  ರಾಜ್ಯದಲ್ಲಿ ನಾಳೆಯಿಂದ  ಎಲ್ಲಾ ಶಾಲಾ ಕಾಲೇಜುಗಳು ಪ್ರಾರಂಭ ವಾಗುವ  ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ, ಮುಂಜಾಗರೂತಾ  ಸುರಕ್ಷತಾ ಕ್ರಮಗಳನ್ನು ಕೈಗೊಳ್ಳ  ಲ್ಲಾಗಿದೆ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ.

ಮಾಧ್ಯಮ ಸದಸ್ಯರೊಂದಿಗೆ ಈ ಬಗ್ಗೆ ಮಾತನಾಡಿದ ಸಚಿವರು, ವಿಧ್ಯಾರ್ಥಿಗಳು, ಯಾವುದೇ ಆತಂಕ ಅಥವಾ ಅಭದ್ರತೆಯ ಭಯವಿಲ್ಲದೆ ಪಠ್ಯ ಚಟುವಟಿಕೆ ಗಳಲ್ಲಿ ತೊಡಗಿಕೊಳ್ಳಬೇಕು ಎಂದು ಮನವಿ ಮಾಡಿದರು.

Advertisement
Google search engine

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಕೇವಲ ಬೆರೆಣಿಕೆಯಷ್ಟು ವಿದ್ಯಾರ್ಥಿಗಳು ಹಿಜಾಬ್ ಧರಿಸಿಯೇ ಶಾಲೆಗೆ ಬರುತ್ತೇವೆ ಎಂದಿದ್ದಾರೆ. ಅದು ಅವರ ಸ್ವಾಭಾವಿಕವಾದ ಅಭಿಪ್ರಾಯ ಅಲ್ಲ ಎಂದು ನನ್ನ ಅನಿಸಿಕೆ.

ನಾವೆಲ್ಲರೂ ಉಚ್ಚ ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶಕ್ಕೆ ಗೌರವ ನೀಡಬೇಕು. ಅದರಂತೆ ನಡೆದುಕೊಳ್ಳಬೇಕು, ಎಂದರು.

ಕೆಲವು ಮತೀಯ ಸಂಘಟನೆಗಳು, ಮುಗ್ದ ವಿಧ್ಯಾರ್ಥಿಗಳನ್ನು ಮುಂದಿಟ್ಟುಕೊಂಡು,  ಸಮಾಜ ಹಾಗೂ ಮನಸುಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ, ಅವರನ್ನು ಗುರುತಿಸಿ ತಕ್ಕ ಕಾನೂನು ಕ್ರಮ ಕೈಗೊಳ್ಳಲು, ಸೂಚಿಸಲಾಗಿದೆ, ಎಂದು ತಿಳಿಸಿದರು.

ಹಿಂದಿನ ಲೇಖನಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನ
ಮುಂದಿನ ಲೇಖನರಾಜ್ಯ ಕೈಗಾರಿಕಾ ಭದ್ರತಾ ಪಡೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ